ಜನವರಿ 3 ರಿಂದ, ರಾಜ್ಯದ 43 ಲಕ್ಷ ಮಕ್ಕಳಿಗೆ ಕೋವಿಡ್ ಲಸಿಕೆ…..
ನಿನ್ನೆ ದೇಶವನನುದ್ದೇಶಿಸಿ ಮಾತನಾಡಿದ ಮೋದಿ ಮಕ್ಕಳಿಗೆ ಕೋವಿಡ್ ಲಸಿಕೆ ಕುರಿತಂತೆ ಮಾತನಾಡಿದ್ದಾರು ಅದರಂತೆ ಜನವರಿ 3 ರಿಂದ ರಾಜ್ಯದಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಲಸಿಕೆಯನ್ನು ಪ್ರಾರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು. ಒಟ್ಟು 43 ಲಕ್ಷ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಎಂದು ತಿಳಿಸಿದ್ದಾರೆ.
ಆದರೆ ತಮ್ಮ ಮಕ್ಕಳಿಗೆ ಕರೋನಾ ಲಸಿಕೆಯನ್ನು ಹೇಗೆ ನೀಡಬೇಕೆಂದು ಪೋಷಕರು ಸ್ವಲ್ಪ ಗೊಂದಲಕ್ಕೊಳಗಾಗಿದ್ದಾರೆ. ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ. ಮಕ್ಕಳಿಗೆ ಲಸಿಕೆಯನ್ನು ಹೇಗೆ ನೀಡಲಾಗುತ್ತದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ರಾಜ್ಯದಲ್ಲಿ ಡಿಸೆಂಬರ್ 28 ರಿಂದ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ಹತ್ತು ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಲಾಗುವುದು. ಒಟ್ಟು 75% ಅರ್ಹ ಜನಸಂಖ್ಯೆಗೆ 2ನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಕೊಮೊರ್ಬಿಡಿಟಿ ಇರುವವರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವುದು ಜನವರಿ 10 ರಿಂದ ಪ್ರಾರಂಭವಾಗುತ್ತದೆ: ಕರ್ನಾಟಕ ಆರೋಗ್ಯ ಸಚಿವ ಡಾ ಸುಧಾಕರ್ ಕೆ








