ರಾಮು ಫಿಲಂಸ್ ಸಂಸ್ಥೆಯಿಂದ ನಿರ್ಮಾಣವಾಗಿರುವ “ಅರ್ಜುನ್ ಗೌಡ” ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಮುನ್ನವೇ ರಾಮು ಅವರ ನಿಧನವಾಗಿರುವುದು ನಿಜಕ್ಕೂ ನೋವಿನ ಸಂಗತಿ.
ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿರುವ ಈ ಚಿತ್ರದ ನಾಯಕನಾಗಿ ಪ್ರಜ್ವಲ್ ದೇವರಾಜ್ ಅಭಿನಯಿಸಿದ್ದಾರೆ. ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ನಟಿಸಿದ್ದಾರೆ. ಬಾಲಿವುಡ್ ನ ರಾಹುಲ್ ದೇವ್, ಸ್ಪರ್ಶ ರೇಖ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭತ್, ಜೀವನ್, ಹನುಮಂತೇ ಗೌಡ, ಮೋಹನ್ ಜುನೇಜ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಶಂಕರ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ , ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿರಾಜು ಅವರ ನೃತ್ಯ ನಿರ್ದೇಶನ ಅರ್ಜುನ್ ಗೌಡ ಚಿತ್ರಕ್ಕಿದೆ.