ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ | 12 ಜನರ ಸಾವು, 20 ಮಂದಿ ಗಾಯಾಳು
1 min read
ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತ | 12 ಜನರ ಸಾವು, 20 ಮಂದಿ ಗಾಯಾಳು Vaishno Devi saaksha tv
ಜಮ್ಮು ಮತ್ತು ಕಾಶ್ಮೀರದ ತ್ರಿಕೂಟ ಬೆಟ್ಟಗಳ ಮೇಲಿರುವ ಪ್ರಸಿದ್ಧ ದೇಗುಲ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಭಕ್ತರ ಭಾರೀ ನೂಕುನುಗ್ಗಲಿನಿಂದ ಕಾಲ್ತುಳಿತ ಸಂಭವಿಸಿದೆ.
ಹೊಸ ವರ್ಷಾಚರಣೆಯ ಪ್ರಯುಕ್ತ ದೇವಾಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳು, ಈ ಸಂದರ್ಭದಲ್ಲಿ ದೇವಸ್ಥಾನದ ಮೂರನೇ ಗೇಟ್ ಘಟನೆ ಸಂಭವಿಸಿದೆ.
ಕಾಲ್ತುಳಿತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ.
ಸಾವನ್ನಪ್ಪಿದ 12 ಜನರ ದು ಅಧಿಕಾರಿಗಳು ತಿಳಿಸಿದ್ದಾರೆ. ದೇಹಗಳನ್ನು ಗುರುತಿಸುವಿಕೆ ಮತ್ತು ಇತರ ಕಾನೂನು ಔಪಚಾರಿಕತೆಗಳಿಗಾಗಿ ಕತ್ರಾ ಮೂಲ ಶಿಬಿರದಲ್ಲಿರುವ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಇಪ್ಪತ್ತು ಜನರನ್ನು ಮಾತಾ ವೈಷ್ಣೋ ದೇವಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮಾತಾ ವೈಷ್ಣೋದೇವಿ ಭವನದಲ್ಲಿ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ತಲಾ 2 ಲಕ್ಷ ಪರಿಹಾರ ಘೋಷಿಸಿದರು.
ಗಾಯಗೊಂಡವರಿಗೆ 50,000 ನೀಡಲಾಗುವುದು ಎಂದು ಮೋದಿ ಹೇಳಿದರು.
ಮಾತಾ ವೈಷ್ಣೋದೇವಿ ದೇವಸ್ಥಾನದಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ನೋವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂತಾಪ ಸೂಚಿಸಿದ್ದಾರೆ.