24 ಗಂಟೆಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಸಾವು
ಚಾಮರಾಜನಗರ : ಕೋವಿಡ್ ಆಸ್ಪತ್ರೆಯಲ್ಲಿ ಕೋರೊನಾ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 9 ಗಂಟೆಯ ತನಕ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.
24 ಗಂಟೆ ಅವಧಿಯಲ್ಲಿ ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿ ಕೋವಿಡ್ ಸೋಂಕಿತರು ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 6 , ಯಳಂದೂರು ತಾಲ್ಲೂಕಿನಲ್ಲಿ 1 , ಕೊಳ್ಳೇಗಾಲ ತಾಲ್ಲೂಕಿನಲ್ಲಿ 3 , ಹನೂರು ತಾಲ್ಲೂಕಿನ 1, ಗುಂಡ್ಲುಪೇಟೆ 1, ಸೇರಿ 12 ಮಂದಿ ದುರ್ಮರಣ ಹೊಂದಿದ್ದಾರೆ ಎಂದು ಚಾಮರಾಜನಗರ ಕೋವಿಡ್ ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 8 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 3 ಮಂದಿ, ಕೊಳ್ಳೇಗಾಲ ತಾಲ್ಲೂಕಿನ 3 , ಯಳಂದೂರು ತಾಲ್ಲೂಕಿನ 1, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಭಾನುವಾರ ಸಂಜೆ 6 ರಿಂದ ಸೋಮವಾರ ಬೆಳಗ್ಗೆ 9 ಗಂಟೆಯ ತನಕ 4 ಮಂದಿ ಸಾವನ್ನಪ್ಪಿದ್ದು, ಚಾಮರಾಜನಗರ ತಾಲ್ಲೂಕಿನ 3 ಮಂದಿ , ಹನೂರು ತಾಲ್ಲೂಕಿನ ಒಬ್ಬರು ಸಾವನ್ನಪ್ಪಿದ್ದಾರೆ.
24 ಗಂಟೆಯ ಅವಧಿಯಲ್ಲಿ ಕೋವಿಡ್ ಆಸ್ಪತ್ರೆಯಲ್ಲಿ ಮೃತರಾದ 15 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರು ಸಾವನ್ನಪಿದರೆ, 5 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳಿಂದ ಸಾವನ್ನಪ್ಪಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಣ ಮಾಡಲು ರಾಜ್ಯ ಸರ್ಕಾರ ಟಫ್ ರೂಲ್ಸ್ ಜಾರಿಗೊಳಿಸುವ ಮೂಲಕ ಲಾಕ್ ಡೌನ್ ಗೆ ಮುಂದಾಗಿದೆ. ಇಷ್ಟೆಲ್ಲಾ ಕಟ್ಟೆಚ್ಚರ ಇದ್ದರೂ ಸಹ ಚಾಮರಾಜನಗರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣವೂ ಸಹ ಅಧಿಕವಾಗುತ್ತಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಹಾಗೂ ಸೋಂಕಿತರು ಸಾವನ್ನಪ್ಪುತ್ತಿರುವ ಸಂಖ್ಯೆ ಅಧಿಕವಾಗುತ್ತಿರುವ ಬಗ್ಗೆ ಜಿಲ್ಲೆಯ ಜನತೆ ತೀರಾ ಆತಂಕದಲ್ಲಿದ್ದಾರೆ.










