ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುರಿದಿದ್ದು, ಕಳೆದ 20 ದಿನಗಳಲ್ಲಿ 12 ಲಕ್ಷ ಕೊರೊನಾ ಸೋಂಕಿನ ಕೇಸ್ ಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 68,898 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 29,05,823 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಒಂದೇ ದಿನದಲ್ಲಿ ದೇಶದಲ್ಲಿ 62,282 ಜನ ಕೊರೋನಾದಿಂದ ಗುಣಮುಖರಾಗಿದ್ದು, 983 ಜನ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 54,849 ಕ್ಕೆ ತಲುಪಿದೆ.
ಏತನ್ಮಧ್ಯೆ ದೇಶದ ಒಟ್ಟಾರೆ 29,05,823 ಮಂದಿ ಸೋಂಕಿತರ ಪೈಕಿ 21,58,946 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ 6,92,028 ಸಕ್ರಿಯ ಪ್ರಕರಣಗಳು ದೇಶದಲ್ಲಿವೆ.