ಚಾಮರಾಜನಗರ: ಹೊಲದಲ್ಲಿ ಬೆಳೆದಿದ್ದ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಗಾಂಜಾ ಬೆಳೆದಿದ್ದ ಹೊಲದ ಮೇಲೆ ದಾಳಿ ನಡೆಸಿರುವ ಪೊಲೀಸರು 12 ಲಕ್ಷ ರೂ. ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿಹೊಸೂರು ಎಂಬ ಗ್ರಾಮದ ಮಾರ ಎಂಬ ಯುವಕ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಮಾಹಿತಿಯ ಹಿನ್ನೆಲೆಯಲ್ಲಿ ರಾಮಾಪುರ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. 211 ಕೆಜಿ ತೂಕದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








