RAIN | ಮಹಾಮಳೆಗೆ ರಾಜ್ಯದಲ್ಲಿ 12 ಮಂದಿ ಸಾವು
ರಾಜ್ಯದಲ್ಲಿ ಮಹಾ ಮಳೆಗೆ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹೆಚ್ಚು ಮಳೆ ಬೀಳುತ್ತಿರುವ ಜಿಲ್ಲೆಗಳ ಡಿಸಿಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ ಒಂದು ತಿಂಗಳಿನಲ್ಲಿ ಮಳೆಯಿಂದಾಗಿ ರಾಜ್ಯದಲ್ಲಿ 12 ಮಂದಿ ಮೃತಪಟ್ಟಿದ್ದಾರೆ ಎಂದರು.

ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ನಾನಾ ಅವಾಂತರಗಳನ್ನು ಸೃಷ್ಟಿಸಿದೆ.
ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ.
ಬೆಳೆ ಪರಿಹಾರದ ಬಗ್ಗೆ ಅಧಿಕಾರಗಳೊಂದಿಗೆ ಚರ್ಚಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.