ಲಕ್ನೋ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ವ್ಯಾನ್ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ 12 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹತ್ರಾಸ್ ನ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಈ ಘಟನೆ ನಡೆದಿದೆ. ಬಸ್ ವೊಂದು ಹಿಂದಿನಿಂದ ವ್ಯಾನ್ ಗೆ (Accident) ಡಿಕ್ಕಿ ಹೊಡೆದ ಪರಿಣಾಮ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ 12 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಈ ಘಟನೆಯಲ್ಲಿ 16 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸ್ ವರಿಷ್ಠಾಧಿಕಾರಿ ನಿಪುನ್ ಅಗರ್ವಾಲ್ ಈ ಕುರಿತು ಪ್ರತಿಕ್ರಿಯಿಸಿದ್ದು, ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ (Agra-Aligarh National Highway)ಬಸ್ ಓವರ್ಟೇಕ್ ಮಾಡಲು ಪ್ರಯತ್ನಿಸುವಾಗ ವ್ಯಾನ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಪ್ರಯಾಣಿಕರು ಹತ್ರಾಸ್ನಿಂ ದ ಆಗ್ರಾಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.