ಬಿಜೆಪಿಯ 120 ಶಾಸಕರೂ ಸಿಎಂ ಹುದ್ದೆಗೆ ಅರ್ಹರು : ಮುರುಗೇಶ್ ನಿರಾಣಿ
ಕಲಬುರಗಿ : ಬಿಜೆಪಿ ಪಕ್ಷದ 120 ಜನ ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದೆ. ಮುಂದಿನ ಸಿಎಂ ಯಾರು ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುವಾಗಲೇ ಸಿಎಂ ರೇಸ್ ನಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ.
ಅದರಲ್ಲಿ ಮುರುಗೇಶ್ ನಿರಾಣಿ ಅವರ ಹೆಸರು ಕೂಡ ಮುನ್ನಲೆಗೆ ಬಂದಿದೆ. ಈ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದು, ಈ ಕುರಿತಂತೆ ನಾನು ಲಾಬಿ ಮಾಡುತ್ತಿಲ್ಲ, ರಾಷ್ಟ್ರಿಯ ನಾಯಕರು ಅಳೆದು ತೂಗಿ ಅರ್ಹರನ್ನು ಸಿಎಂ ಮಾಡುತ್ತಾರೆ ಎಂದಿದ್ದಾರೆ.
ನಮ್ಮ ಪಕ್ಷದ 120 ಜನ ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ.
ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲು ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.