ಒಡಿಶಾದಲ್ಲಿ 120 ಕೈದಿಗಳಿಗೆ ಕೋವಿಡ್ ಪಾಸಿಟಿವ್
ಒಡಿಶಾ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಒಡಿಶಾದಲ್ಲಿ 120 ಕೈದಿಗಳಿಗೆ ಕೋವಿಡ್-19 ದೃಢಗೊಂಡಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರಿಗೆ ಮಾಹಿತಿ ನೀಡಿರುವ ಡಿಐಜಿ ಶುಭಕಾಂತ ಮಿಶ್ರಾ, ಗಂಭೀರ ರೋಗಿಗಳನ್ನು ಕೋವಿಡ್ ಆಸ್ಪತ್ರೆಗಳಿಗೆ ವರ್ಗಾಯಿಸಲಾಗಿದ್ದು, 449 ಅಪರಾಧಿಗಳನ್ನು 90 ದಿನಗಳ ಪೆರೋಲ್ನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಕೊರೊನಾವೈರಸ್ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಪಾಟ್ನಾಗಡ ಸಬ್ ಜೈಲು ಮತ್ತು ಬೆರ್ಹಾಂಪುರ ಜೈಲಿನಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ ಎಂದು ಹೇಳಿದ್ದಾರೆ. ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡ ಬಳಿಕವೂ ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,43,144 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 4 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಕೇಂದ್ರ ಆರೋಗ್ಯ ಇಲಾಕೆಯ ಮಾಹಿತಿ ಪ್ರಕಾರ, ನಿನ್ನೆ 3,43,144 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 4 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 2,40,46,809ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 2,62,317ಕ್ಕೆ ತಲುಪಿದೆ. ಇನ್ನು ಮುಖ್ಯವಾಗಿ ನಿನ್ನೆ 3,44,776 ಮಂದಿ ಕೊರೋನಾದಿಂದ ಚೇತರಿಸಿಕೊಂಡಿದ್ದು, ಒಟ್ಟು ಚೇತರಿಕೆಯ ಪ್ರಮಾಣ 2,00,79,599ಕ್ಕೆ ತಲುಪಿದೆ. ದೇಶದಲ್ಲಿನ್ನೂ 37,04,893 ಸಕ್ರಿಯ ಪ್ರಕರಣಗಳಿವೆ.
ಇನ್ನೂ ಒಡಿಶಾದಲ್ಲಿ ಇದುವರೆಗೆ 5.5 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಕೋವಿಡ್ ಸೋಂಕು ದೃಢಗೊಂಡಿದ್ದು, 2,000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 1,00,313 ಸಕ್ರಿಯ ಪ್ರಕರಣಗಳಿದ್ದು, 4.5 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.