ಕೊಡಗು: ಜಿಲ್ಲೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ಪಿಕ್ ಪಾಕೆಟ್ ಮಾಡಿದ್ದ ಖದೀಮರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಿಜೆಪಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ಸೇರಿದಂತೆ ಇತರೆ ನಾಯಕರ ಪರ್ಸ್ ಕಳ್ಳತನ ಮಾಡಿ ಆರೋಪಿಗಲು ಪರಾರಿಯಾಗಿದ್ದರು. ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ನಡೆದಿದ್ದ ಬಿಜೆಪಿ ಪ್ರಚಾರದ ಸಮಾವೇಶದಲ್ಲಿ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ಸೇರಿದಂತೆ ಭಾಗವಹಿಸಿದ್ದ ಹಲವು ನಾಯಕರ ಪರ್ಸ್ ಕಳ್ಳತನವಾಗಿದ್ದವು.
ದೂರು ದಾಖಲಿಸಿಕೊಂಡು ಕಾರ್ಯಚರಣೆಗಿಳಿದಿದ್ದ ಕೊಡಗು ಜಿಲ್ಲಾ ಪೊಲೀಸರು 13 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರು ಶಿವಮೊಗ್ಗ, ಭದ್ರಾವತಿ, ನೆಲಮಂಗಲ ಮೂಲದವರು ಎನ್ನಲಾಗಿದೆ. ಬಂಧಿತರಿಂದ ಎರಡು ಕಾರು, 12 ಮೊಬೈಲ್, 65,900 ರೂ. ನಗದು ಹಣ ವಶಕ್ಕೆ ಪಡೆಯಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಕುಶಾಲನಗರದಲ್ಲಿ ಕಾರ್ಯಕರ್ತರ ಸಮಾವೇಶ ನಡೆದಿತ್ತು. ಈ ವೇಳೆ ನೂರಾರು ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು. ಆಗ ಗದ್ದಲ ಉಂಚಾಗಿತ್ತು.
ಈ ವೇಳೆ ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಮತ್ತು ಕೆಜಿ ಬೋಪಯ್ಯ ಸೇರಿದಂತೆ ಇತರೆ ಬಿಜೆಪಿ ಮುಖಂಡರ ಪರ್ಸ್ ಕಳ್ಳತನ ಆಗಿದ್ದವು. ಅಪ್ಪಚ್ಚು ರಂಜನ್ ಅವರ ಪರ್ಸ್ನಲ್ಲಿ 25000 ರೂ ಹಾಗೂ ಬೋಪಯ್ಯ ಅವರ ಪರ್ಸ್ನಲ್ಲಿ 17000 ರೂ. ಇತ್ತು. ಇವರಿಬ್ಬರ ಜೊತೆಗೆ ಇನ್ನೂ ಅನೇಕರ ಜೇಬಿನಲ್ಲಿದ್ದ ಪರ್ಸ್ ಕಳ್ಳತನವಾಗಿದ್ದು, ಒಟ್ಟು ಅಂದಾಜು 5 ಲಕ್ಷ ರೂ. ಅಧಿಕ ಹಣ ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಕಳ್ಳರನ್ನು ಬಂಧಿಸಿದ್ದಾರೆ. ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ಬೇಕಂತಲೇ ನೂಕು ನುಗ್ಗಲು ಸೃಷ್ಟಿ ಹಲವರ ಪರ್ಸ್ ಎಗರಿಸಿದ್ದರು.