ದೇಶದಲ್ಲಿ 13 ಲಕ್ಷ ಮಹಿಳೆಯರು ನಾಪತ್ತೆ…!
13 lakh women are missing in the country…!
ದೇಶದಲ್ಲಿ ಮಹಿಳೆಯರ ನಾಪತ್ತೆ ಪ್ರಕರಣಗಳು ಹೆಚ್ಚುತ್ತಿವೆ. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದು ಅಗತ್ಯವಿದೆ.
2019ರಿಂದ 2021ರ ನಡುವಿನ ಮೂರು ವರ್ಷದ ಅವಧಿಯಲ್ಲಿ ದೇಶದಲ್ಲಿ ಬಾಲಕಿಯರು ಸೇರಿದಂತೆ 13.13 ಲಕ್ಷಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇದರಲ್ಲಿ ಮಧ್ಯಪ್ರದೇಶ ರಾಜ್ಯ ಒಂದರಲ್ಲೇ 1.98 ಲಕ್ಷ ಮಹಿಳೆಯರು ಕಾಣೆಯಾಗಿದ್ದಾರೆ. ಇನ್ನು ಕರ್ನಾಟಕದಲ್ಲಿ 39,935 ಬಾಲಕಿಯರು ಹಾಗೂ ಮಹಿಳೆಯರು ನಾಪತ್ತೆ ಯಾಗಿದ್ದಾರೆ.
ಕಳೆದ ವಾರ ಸಂಸತ್ತಿನಲ್ಲಿ ಈ ಅಂಕಿ-ಅಂಶಗಳನ್ನು ಮಂಡಿಸಿದ ಕೇಂದ್ರ ಗೃಹ ಸಚಿವಾಲಯ, 2019ರಿಂದ 2021ರವರೆಗೆ ದೇಶದಲ್ಲಿ 18 ವರ್ಷ ಮೇಲ್ಪಟ್ಟ 10,61,638 ಮಹಿಳೆಯರು ಹಾಗೂ 18ಕ್ಕಿಂತ ಕಡಿಮೆ ವಯಸ್ಸಿನ 2,51,430 ಬಾಲಕಿಯರು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದೆ.
ಕರ್ನಾಟಕದಲ್ಲಿ 2019ರಲ್ಲಿ 18 ವರ್ಷಕ್ಕಿಂತ ಕಳಗಿನ 703 ಬಾಲಕಿಯರು ಹಾಗೂ 18 ವರ್ಷ ಮೇಲ್ಪಟ್ಟ 12,247 ಮಹಿಳೆಯರು ನಾಪತ್ತೆಯಾಗಿದ್ದಾರೆ.
2020ರಲ್ಲಿ 834 ಬಾಲಕಿಯರು ಹಾಗೂ 11,950 ಮಹಿಳೆಯರು, 2021ರಲ್ಲಿ 1,237 ಬಾಲಕಿಯರು ಹಾಗೂ 12,964 ಮಹಿಳೆಯರು ನಾಪತ್ತೆಯಾಗಿದ್ದಾರೆ. ಒಟ್ಟು ಮೂರು ವರ್ಷಗಳಲ್ಲಿ 18 ವರ್ಷ ಒಳಗಿನವರು 2,774 ಬಾಲಕಿಯರು ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟ 36, 891 ಮಹಿಳೆಯರು ನಾಪತ್ತೆಯಾಗಿದ್ದಾರೆ.








