ಕೊರೋನಾ ಸೋಂಕಿನಿಂದ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 13 ಜನರನ್ನು ಗುರುವಾರ ಬಿಡುಗಡೆ ಮಾಡಲಾಯಿತು.
ಕೊರೋನಾ ಸೋಂಕಿತರಿಗೆ ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತರ ಪೈಕಿ ಗುಣಮುಖರಾದ 13 ಜನರನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಪೇಶಂಟ್ ನಂ. 357,463, 524, 539, 540, 543, 544, 546, 547, 548, 549, 550, 552 ಎಂದು ಗುರುತಿಸಲಾದವರು ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಬಿಮ್ಸ್ ಮಾಹಿತಿ ನೀಡಿದೆ.
ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಪಾಲಿಸಬೇಕಾದ ನಿಯಮಗಳ ಬಗ್ಗೆ ಬಿಡುಗಡೆಯಾದವರಿಗೆ ತಿಳಿವಳಿಕೆ ನೀಡಲಾಗಿದೆ








