ಮೈಸೂರು: ಬ್ರಿಟನ್‍ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್ ಅಟ್ಟಹಾಸ ನಡೆದಿರುವ ಹಿನ್ನೆಲೆಯಲ್ಲಿ ಲಂಡನ್‍ನಿಂದ ಮೈಸೂರಿಗೆ ಬಂದವರ ಮಾಹಿತಿ ಪತ್ತೆಯಾಗಿದೆ. 137 ಮಂದಿ ಬ್ರಿಟನ್‍ನಿಂದ ಬಂದಿದ್ದಾರೆ. ಅದರಲ್ಲಿ ಡಿ.21ರಂದು 18 ಮಂದಿ ಆಗಮಿಸಿದ್ದರು. ಎಲ್ಲಾ 18 ಜನರ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 137 ಜನರ ಪೈಕಿ 119 ಮಂದಿಯ ಪರೀಕ್ಷೆಯನ್ನು ಮಾಡುತ್ತಿದ್ದೇವೆ. ಹೊಸ ವೈರಸ್ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಲಭ್ಯವಾಗುತ್ತಿಲ್ಲ. ಆದರೆ ವೈರಸ್ ಹರಡುವಿಕೆ ಪ್ರಮಾಣ ಹೆಚ್ಚಿದೆ ಅಂತಷ್ಟೆ ಗೊತ್ತಾಗಿದೆ. ಇದಕ್ಕಾಗಿ ಎಲ್ಲ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಕೊರೊನಾ ರೂಪಾಂತರದ ಬಗ್ಗೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಹೊಸ ವರ್ಷದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನವು ಇರುವುದಿಲ್ಲ. ಉಳಿದ ಕಾರ್ಯಕ್ರಮಗಳ ಬಗ್ಗೆಯೂ ಎಚ್ಚರ ವಹಿಸಿದ್ದೇವೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈ ಬಾರಿ ಹೊಸವರ್ಷಾಚರಣೆ ಇಲ್ಲ
ಈ ಬಾರಿ ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಜ್ ಹಾಕಲಾಗಿದೆ. ಅರಮನೆ ದೀಪಾಲಂಕಾರ, ಬಾಣಬಿರುಸು ಪ್ರದರ್ಶನವು ಇರೋದಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಹೊಸ ವರ್ಷದ ದಿನ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಬರ್ಂಧ ಬಗ್ಗೆ ಚಿಂತನೆ ಮಾಡುತ್ತೇವೆ. ಏಕಾದಶಿ ಬಗ್ಗೆ ದೇವಾಲಯ ಮುಚ್ಚಲು ಆದೇಶ ನೀಡಲು ಸಾಧ್ಯವಿಲ್ಲ. ಆದ್ರೆ ಕೋವಿಡ್ ನಿಯಮ ಪಾಲಿಸಿ ಭಕ್ತರ ದರ್ಶನಕ್ಕೆ ಅವಕಾಶ ಕೊಡುವಂತೆ ಸೂಚಿಸುತ್ತೇವೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel