ಮುಂಬೈ: ಒಂದೇ ದಿನ ಬರೋಬ್ಬರಿ 14 ಲಕ್ಷ ಕೋಟಿ ರೂ. ವನ್ನು ಹೂಡಿಕೆದಾರರು ಕಳೆದುಕೊಂಡಿದ್ದಾರೆ.
ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚ್ಯಂಕ ನಿಫ್ಟಿ ಅಂಕ ಹೆಚ್ಚಾಗಿ ಇಳಿಕೆಯಾದ ಹಿನ್ನೆಲೆಯಲ್ಲಿ ಒಂದೇ ದಿನ ಹೂಡಿಕೆದಾರರು ಸುಮಾರು 14 ಲಕ್ಷ ಕೋಟಿ ರೂ. ಕಳೆದುಕೊಂಡಿದ್ದಾರೆ. ನಿಫ್ಟಿ ಮಿಡ್ಕ್ಯಾಪ್ ಮತ್ತು ನಿಫ್ಟಿ ಸ್ಮಾಲ್ ಕ್ಯಾಪ್ ಇಂಡೆಕ್ಸ್ ಶೇ. 4ರಷ್ಟು ಇಳಿಕೆಯಾಗಿದೆ.
ಎರಡು ವರ್ಷದ ಬಳಿಕ ಒಂದೇ ದಿನ ನಿಫ್ಟಿ ಮಿಡ್ಕ್ಯಾಪ್ ಇಷ್ಟೊಂದು ಇಳಿಕೆಯಾಗಿದೆ. ಮಾರುಕಟ್ಟೆ ಮೌಲ್ಯ 5 ಸಾವಿರ ಕೋಟಿ ರೂ. ಇರುವ ಕಂಪನಿಗಳು ಸ್ಮಾಲ್ಕ್ಯಾಪ್ ಎಂದು ಗುರುತಿಸಿಕೊಂಡರೆ, 5 ಸಾವಿರ ಕೋಟಿ ರೂ.ನಿಂದ 20 ಸಾವಿರ ಕೋಟಿ ರೂ. ಮಾರುಕಟ್ಟೆ ಮೌಲ್ಯ ಇರುವ ಕಂಪನಿಗಳು ಮಿಡ್ ಕ್ಯಾಪ್ ವ್ಯಾಪ್ತಿಯಲ್ಲಿ ಬರುತ್ತವೆ ಎನ್ನಲಾಗಿದೆ.
ಕೆಲ ತಿಂಗಳಿನಿಂದ ಸಣ್ಣ ಮತ್ತು ಮಿಡ್ ಕ್ಯಾಪ್ ಕಂಪನಿಗಳ ಷೇರುಗಳ ಬೆಲೆ ಏರಿಕೆಯಾಗುತ್ತಿದೆ. ಏರಿಕೆ ಆಗುತ್ತಿರುವ ಷೇರಿನ ಬೆಲೆಗಳು ಆಯಾ ಕಂಪನಿಗಳ ಆರ್ಥಿಕ ಮೂಲಗಳಿಗೆ ಸಂಬಂಧಿಸಿದಂತೆ ಕಾಣುತ್ತಿಲ್ಲ.