ವಸತಿ ನಿಲಯದ ಊಟ ಸೇವಿಸಿ 14 ವಿದ್ಯಾರ್ಥನಿಯರು ಅಸ್ವಸ್ಥ Saaksha Tv
ಬೆಳಗಾವಿ: ವಸತಿ ನಿಲಯದ ಊಟ ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಮದುರ್ಗ ಪಟ್ಟಣದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದಿದೆ.
ರಾಮದುರ್ಗ ಪಟ್ಟಣದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬಾಲಕಿಯರ ವಸತಿ ಶಾಲೆಯ 14ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಇಂದು ಬೆಳಿಗ್ಗೆ ಊಟದ ನಂತರ ಅಸ್ಥವ್ಯಸ್ಥಗೊಂಡಡಿದ್ದಾರೆ.
ಅಸ್ವಸ್ಥರಾಗಿದ್ದ ವಿದ್ಯಾರ್ಥಿನಿಯರಲ್ಲಿ 4 ಜನರನ್ನು ರಾಮದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂಳಿದ ವಿದ್ಯಾರ್ಥಿನಿಯರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಮದುರ್ಗ ತಹಶಿಲ್ದಾರ್ ಮಾಹಿತಿ ನೀಡಿದ್ದಾರೆ.








