33 ವರ್ಷದ ಮಹಿಳೆಯೊಬ್ಬರಿಗೆ ಎಂಟು ವರ್ಷಗಳ ಅವಧಿಯಲ್ಲಿ ಸುಮಾರು 14 ಬಾರಿ ಒತ್ತಾಯಪೂರ್ವಕವಾಗಿ ಗರ್ಭಪಾತ ಮಾಡಿಸಲಾಗಿದೆ… ಇದ್ರಿಂದಾಗಿ ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ..
ಮಹಿಳೆಯು 33 ವರ್ಷಗಳ ಕಾಲ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು ಎನ್ನಲಾಗಿದೆ… ಇದೇ ಅವಧಿಯಲ್ಲಿ ಅವರಿಗೆ ಪದೇ ಪದೇ ಗರ್ಭಪಾತ ಮಾಡಿಸಲಾಗಿದೆ ಎನ್ನಲಾಗಿದೆ..
ಜುಲೈ 5 ರಂದು ಆಗ್ನೇಯ ದೆಹಲಿಯ ಜೈತ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ…
ಅಲ್ಲದೇ ಡೆತ್ ನೋಟ್ ಕೂಡ
ಬರೆದಿಟ್ಟಿಇದ್ದಾರೆ.. ಸೂಸೈಡ್ ನೋಟ್‌ನಲ್ಲಿ, ಮದುವೆಯ ಭರವಸೆಯ ಮೇರೆಗೆ ತನ್ನೊಂದಿಗೆ ದೈಹಿಕ ಸಂಬಂಧ ಬೆಳೆಸಿದ ವ್ಯಕ್ತಿಯೊಂದಿಗೆ ಲಿವ್-ಇನ್ ಸಂಬಂಧ ಹೊಂದಿದ್ಧಾಗಿ ಮಹಿಳೆ ಆರೋಪಿಸಿದ್ದಾರೆ..
ನೋಯ್ಡಾದ ಸಾಫ್ಟ್‌ವೇರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯ ನಂತರ ಮಹಿಳೆ ಕಳೆದ ಏಳು-ಎಂಟು ವರ್ಷಗಳಿಂದ ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ,” ಎಂದು ಪೊಲೀಸರು ತಿಳಿಸಿದ್ದಾರೆ..
ಬಿಹಾರದ ಮುಜಾಫರ್‌ಪುರದಲ್ಲಿ ನೆಲೆಸಿರುವ ಆಕೆಯ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.