ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ, ಕೊಲೆ ಶಂಕೆ
ನೇಣು ಬಿಗಿದ ಸ್ಥಿತಿಯಲ್ಲಿ 14 ವರ್ಷದ ಬಾಲಕಿಯ ಮೃತದೇಹ ಪತ್ತೆಯಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ, ಕೆ ಆರ್ ಪೇಟೆ ತಾಲೋಕಿನ ಬೂಕನಕೆರೆಯಲ್ಲಿ ಈ ಘಟನೆ ನಡೆದಿದ್ದು ಬಾಲಕಿಯ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ..
ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಪೋಷಕರು ಕೆ ಆರ್ ಪೇಟೆಯ ಗ್ರಾಮಾಂತರ ಪೊಲೀಸ್ ಠಾಣೆಗೆದೂರು ನೀಡಿದ್ದಾರೆ. ಪೋಷಕರು ಬಾಲಕಿಯನ್ನ ಸ್ವಲ್ಪ ದಿನದ ಹಿಂದೆ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿ ಎಂಬ ಆಘಾತಕಾರಿ ವಿಚಾರ ಬೆಳಕಿಗೆ ಬಂದಿತ್ತು.
ಪಕ್ಕದ ಮನೆಯ 46 ವರ್ಷದ ಪರಮೇಶ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ತಾಯಿಯ ಬಳಿ ಹೇಳಿಕೊಳ್ಳುತ್ತಿದ್ದಳಂತೆ, ನನ್ನ ಮಗಳ ಮೇಲೆ ಅತ್ಯಾಚಾರ ಎಸೆಗಿದ್ದಾನೆ, ಈ ವಿಷಯ ಬೆಳಕಿಗೆ ಬಂದರೆ ಎಲ್ಲಿ ತಪ್ಪಿತಸ್ಥನಾಗ್ತಿನಿ ಎಂಬ ಭಯಕ್ಕೆ ಮಗಳನ್ನ ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬಾಲಕಿಯ ತಾಯಿ ಕೆಲಸಕ್ಕೆ ಹೋಗಿ ವಾಪಸ್ ಆದ ಬಳಿಕ ನೇಣು ಬಿಗಿದ ಸ್ಥತಿಯಲ್ಲಿ ಶವ ಪತ್ತೆಯಾಗಿತ್ತು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ…