ಬೆಳಗಾವಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ – Saaksha Tv
ಬೆಳಗಾವಿ: ಹಿಜಾಬ್ ವಿವಾದಕ್ಕೆ ಸಂಭಂದಿಸಿದಂತೆ ಸುದೀರ್ಘ ವಿಚಾರಣೆಯ ನಂತರ ಹೈಕೋರ್ಟ್ ಇಂದು ತೀರ್ಪು ಪ್ರಕಟಿಸದ್ದು, ಬೆಳಗಾವಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಇಂದು ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂದಿನ ಆದೇಶದವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಆದೇಶ ಹೊರಡಿಸಿದ್ದಾರೆ.
ಅಲ್ಲದೆ ಬೆಳಗಾವಿಯ ಕೆಲವು ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೆಲ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರು. ಇಂಥ ಕಾಲೇಜುಗಳ ಎದುರು ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಪ್ರಮುಖ ವೃತ್ತಗಳಲ್ಲಿ ಹಾಗೂ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ನಿಯೋಜನೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಯಾವುದೇ ಅಹಿತಕರ ಘಟನೆ ಆಗದಂತೆ ಬೆಳಗಾವಿ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ.