ಬೆಂಗಳೂರು : ಕೊರೊನಾ ಕಂಟ್ರೋಲ್ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, 15 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ
ನಿನ್ನೆ ಕೊರೊನಾ ಸ್ಪೋಟ ಹಿನ್ನೆಲೆ ಸಿಎಂ ಬಿಎಸ್ ವೈ ತುರ್ತು ಸಚಿವ ಸಂಪುಟ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಿದರು.
ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದೆಲ್ಲವನ್ನೂ ಸರ್ಕಾರ ಬಂದ್ ಮಾಡಿದೆ.








