ರಾಜ್ಯಾದ್ಯಂತ 15 ದಿನಗಳ ಕಾಲ ವೀಕೆಂಡ್ ಕರ್ಫ್ಯೂ : ಮಾಲ್ , ಜಿಮ್ ಗಳಿಗೆ ಅನುಮತಿ
ಬೆಂಗಳೂರು: ಕೊರೊನಾ ಹಾವಳಿ ಹೆಚ್ಚಾದ ಬೆನ್ನಲ್ಲೇ ಲಾಕ್ ಡೌನ್ ಜಾರಿಗೊಳಿಸಿದ್ದ ಸರ್ಕಾರ ಇದೀಗ ಕ್ರಮೇಣ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ಸೋಮವಾರದಿಂದ ಸರ್ಕಾರಿ, ಖಾಸಗಿ ಕಚೇರಿ, ಕೈಗಾರಿಕೆ, ವಾಣಿಜ್ಯ ಚಟುವಟಿಕೆ ಶೇಕಡ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು , ಮಾಲ್ ತೆರೆಯಲು ಮೆಟ್ರೋ ಸೇರಿ ಸಾರ್ವಜನಿಕ ಸಾರಿಗೆ ಶೇಕಡ 100 ಪ್ರಯಾಣಿಕರೊಂದಿಗೆ ಕಾರ್ಯಾಚರಣೆಗೆ ಅನುಮತಿ ನೀಡಿದೆ.. ಬಾರ್ ಗಳಿಗೆ ಅವಕಾಶ ನೀಡಲಾಗಿದೆ.
ಆದ್ರೆ 15 ದಿನಗಳ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.. ಹೌದು ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಚಿವರು, ಅಧಿಕಾರಿಗಳು ತಜ್ಞರೊಂದಿಗೆ ಸಭೆ ನಡೆಸಿ ಜುಲೈ 5 ರಿಂದ 19 ರ ವರೆಗೆ 15 ದಿನಗಳ ಕಾಲ ಅನೇಕ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಅಲ್ಲದೇ ಧಾರ್ಮಿಕ ಸ್ಥಳಗಳಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.. ಜೊತೆಗೆ ಮದುವೆ, ಕೌಟುಂಬಿಕ ಶುಭ ಕಾರ್ಯಕ್ರಮಗಳಲ್ಲಿ 100 ಜನರಿಗೆ ಅವಕಾಶ, ಈಜುಕೊಳಗಳಲ್ಲಿ ಕ್ರೀಡಾಪಟುಗಳ ಅಭ್ಯಾಸಕ್ಕೆ ಅವಕಾಶ, ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಪಟುಗಳ ಅಭ್ಯಾಸಕ್ಕೆ ಅವಕಾಶ, ಅಂತ್ಯಸಂಸ್ಕಾರ 20 ಜನರಿಗೆ ಅವಕಾಶ ನೀಡಲಾಗಿದೆ.
ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಆದ್ರೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. ಮುಖ್ಯವಾಗಿ ಸಿನಿಮಾಮಂದಿರಗಳು/ಪಬ್ ಗಳಿಗೆ ಇನ್ನೂ ಅವಕಾಶ ನೀಡಿಲ್ಲ. ಇನ್ನೂ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾವಾಗಿರುತ್ತದೆ.. ಸಾಮಾಜಿಕ ಅಂತರ ಕಾಯ್ದು ಕೊಳ್ಳಬೇಕು.. ಧಾರ್ಮಿಕ ಸಭೆ ಸಮಾರಂಭ, ಪ್ರತಿಭಟನೆ ಇತರೆ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಶೈಕ್ಷಣಿಕ ಸಂಸ್ಥೆಗಳು ತೆರೆಯುವ ಪ್ರತ್ಯೇಕ ತೀರ್ಮಾನ ಮಾಡಲು ನಿರ್ಧಾರ ಮಾಡಿದೆ..
ಜಿಲ್ಲೆಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಸರ್ಕಾರದ ನಿಯಮ ಪಾಲಿಸಬೇಕಿದೆ.
ಉತ್ತರಾಖಂಡ್ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ
ಈಯಮ್ಮನನ್ನ ರಾಜ್ಯಸಭೆ ಸದಸ್ಯೆ ಮಾಡಿದ್ದು ಇದಕ್ಕೇನಾ : ಸಿದ್ದರಾಮಯ್ಯ
ಹೈಕಮಾಂಡ್ ಆದೇಶಕ್ಕೆ ತಲೆಬಾಗಿ ರಾಜೀನಾಮೆ ನೀಡಿದ ತೀರ್ಥ್ ಸಿಂಗ್ – ಉತ್ತರಾಖಂಡ್ ಮುಂದಿನ ಸಿಎಂ ಯಾರು..?