ಪಾಟ್ನಾ: ಮುಂಬರುವ ಲೋಕಸಭಾ ಚುನಾನವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಲು ಪ್ರತಿಪಕ್ಷಗಳು (Opposition) ತೊಡೆ ತಟ್ಟಿವೆ.
ಒಕ್ಕೂಟ ರಚಿಸಿ ಹೋರಾಟ ನಡೆಸುವುದಕ್ಕಾಗಿ ವಿಪಕ್ಷಗಳು ಮೊದಲ ಹೆಜ್ಜೆ ಇಟ್ಟಿವೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ (Patna) ವಿಪಕ್ಷ ನಾಯಕರು ಸಭೆ ಸೇರಿದರು. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಮಮತಾ ಬ್ಯಾನರ್ಜಿ, ಶರದ್ ಪವಾರ್, ಹೇಮಂತ್ ಸೊರೇನ್, ಉದ್ಧವ್ ಠಾಕ್ರೆ, ಸೀತಾರಾಂ ಯೆಚೂರಿ, ಅಖಿಲೇಶ್ ಯಾದವ್, ಎಎಪಿಯ ರಾಘವ್ ಚಡ್ಡಾ, ಮೆಹಬೂಬಾ ಮುಫ್ತಿ ಸೇರಿದಂತೆ 15 ಪಕ್ಷಗಳ ರಾಜಕೀಯ ಮುಖಂಡರು ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಸರ್ಕಾರವನ್ನು ಕಳಗೆ ಇಳಿಸಲು ತಂತ್ರ ಹೆಣೆಯಲಾಗುತ್ತಿದೆ.
ಮೋದಿಯನ್ನು ಮನೆಗೆ ಕಳಿಸೋದು ದೊಡ್ಡ ವಿಚಾರವಲ್ಲ. ನಾವೆಲ್ಲಾ ಒಗ್ಗೂಡಿ ಹೋರಾಟ ನಡೆಸೋಣ ಎಂದು ಕಾಂಗ್ರೆಸ್ ಕರೆ ನೀಡಿದೆ. ಆದರೆ, ಈ ಸಭೆಯಿಂದ ಪ್ರಮುಖ ನಿರ್ಧಾರ ಹೊರ ಬಿದ್ದಿಲ್ಲ. 2 ದಿನಗಳ ಸಭೆ ನಡೆಸಲು ಇಂದಿನ ಮೀಟಿಂಗ್‌ನಲ್ಲಿ ತೀರ್ಮಾನಿಸಲಾಗಿದೆ. ಶಿಮ್ಲಾ ಸಭೆಯಲ್ಲಿ ಸಂಚಾಲಕರನ್ನು ಆಯ್ಕೆ ಮಾಡುವ ಸಂಭವ ಇದೆ. ಆದರೆ 80 ಲೋಕಸಭಾ ಸ್ಥಾನಗಳಿರುವ ಉತ್ತರ ಪ್ರದೇಶದಿಂದ ಕೇವಲ ಸಮಾಜವಾದಿ ಪಕ್ಷ ಮಾತ್ರ ಈ ಸಭೆಯಲ್ಲಿ ಭಾಗವಹಿಸಿದೆ.








