15 ಜನರಿಗೆ ಕೊರೊನಾ ಪಾಸಿಟಿವ್ 7 ದಿನ ಕಾಲೇಜ್ ಬಂದ್ Saaksha Tv
ದಾವಣಗೆರೆ: ಕೊರೊನಾ ಮಹಾಮಾರಿ ರಾಜ್ಯದಲ್ಲಿ ಏರಿಕೆಯಾಗಿದ್ದು, ಇದು ಶಾಲೆ ಮತ್ತು ಕಾಲೇಜುಗಳಲ್ಲಿ ಹೆಚ್ಚಾಗಿ ಹಬ್ಬುತ್ತಿದೆ. ಈ ಹಿನ್ನಲೆಯಲ್ಲಿ ಕೆಲವು ಶಾಲೆ ಮತ್ತು ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಸದ್ಯ ಹರಿಹರ ತಾಲೂಕಿನ ಮಲೆಬೆನ್ನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ 15 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಡಪಟ್ಟಿದೆ.
ಕಾಲೇಜಿನಲ್ಲಿ ವೈದ್ಯಾಧಿಕಾರಿಗಳು 363 ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಿದ್ದರು, ಇದರಲ್ಲಿ 15 ಮಕ್ಕಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆದರಕಾರಣ ಕಾಲೇಜನ್ನು 7 ದಿನಗಳ ಕಾಲ ರಜೆ ಘೋಷಣೆ ಮಾಡುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಸೋಂಕಿತ ವಿದ್ಯಾರ್ಥಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇವರ ಸಂಪರ್ಕದಲ್ಲಿವರಿಗೂ ಕೂಡ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಟೆಸ್ಟ್ ಮಾಡಿದ್ದಾರೆ. ಸಧ್ಯ ಪರೀಕ್ಷಾ ವರದಿ ಬರಬೇಕಿದ್ದು ಪೋಷಕರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.