ಭೋಪಾಲ್: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಸದ್ಯದಲ್ಲೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ಆಸ್ತಿಗಳ ಮೇಲೆ ವಿಧಿಸಲಾದ 2015 ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್ (Madhya Pradesh High Court) ತೆಗೆದು ಹಾಕಿದ್ದು, 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ.
ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಡಿ. 13 ರಂದು, 2017ರ ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ (Enemy Property Act) ಅಡಿ ಶಾಸನಬದ್ಧ ಪರಿಹಾರವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 30 ದಿನಗಳ ಪ್ರಾತಿನಿಧ್ಯ ಸಲ್ಲಿಸಬೇಕೆಂದು ಪಟೌಡಿ ಕುಟುಂಬಕ್ಕೆ ಹೇಳಿತ್ತು. ಈ ಆದೇಶಕ್ಕೆ ಸಂಬಂಧಿಸಿಂತೆ 30 ದಿನಗಳ ಒಳಗಡೆ ಮೇಲ್ಮನವಿ ಸಲ್ಲಿಸದೇ ಇದ್ದರೆ ಕೋರ್ಟ್ ಆದೇಶ ಪ್ರಕಟಿಸುವುದಿಲ್ಲ. ಸಲ್ಲಿಸದಿದ್ದರೆ ಕೋರ್ಟ್ ತತನ್ನದೇ ಆದ ಆರ್ಹತೆಯ ಆಧಾರದ ಮೇಲೆ ಮೇಲ್ಮನವಿಯನ್ನು ಪರಿಗಣಿಸುತ್ತದೆ ಎಂದು ಹೇಳಿತ್ತು. ಆದರೆ, ಪಟೌಡಿ ಮನೆಯವರು ಅರ್ಜಿ ಸಲ್ಲಿಸಿರುವ ಕುರಿತು ಇದುವರೆಗೂ ತಿಳಿದು ಬಂದಿಲ್ಲ.
ಈ ಪ್ರಕರಣದಲ್ಲಿ ಕಕ್ಷಿದಾರರಾಗಿ ಸೈಫ್ ಅಲಿ ಖಾನ್, ಅವರ ತಾಯಿ ಶರ್ಮಿಳಾ ಟ್ಯಾಗೋರ್, ಸಹೋದರಿಯರಾದ ಸೋಹಾ ಅಲಿ ಖಾನ್ ಮತ್ತು ಸಬಾ ಅಲಿ ಖಾನ್ ಮತ್ತು ಮನ್ಸೂರ್ ಅಲಿ ಖಾನ್ ಪಟೌಡಿ ಸಹೋದರಿ ಸಬಿಹಾ ಸುಲ್ತಾನ್, ಮತ್ತು ಕೇಂದ್ರ ಸರ್ಕಾರ ಸೇರಿದಂತೆ ಇನ್ನಿತರರು ಇದ್ದಾರೆ.








