ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,549 ಹೊಸ ಕೋವಿಡ್ ಸೋಂಕು ಪತ್ತೆ…
ಭಾರತದಲ್ಲಿ ಒಂದೇ ದಿನದಲ್ಲಿ 1,549 ಹೊಸ ಕರೋನವೈರಸ್ ಸೋಂಕುಗಳು ಏರಿಕೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,30,09,390 ಕ್ಕೆ ಏರಿಕೆಯಾಗಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 25,106 ಕ್ಕೆ ಇಳಿದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ನಿನ್ನೆ 31 ಕೋವಿಡ್ ಸಾವುಗಳು ವರದಿಯಾಗಿವೆ. ಇಲ್ಲಿಯವರೆಗೆ 5,16,510 ಕೋವಿಡ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಡೇಟಾ ತಿಳಿಸಿದೆ.
ಆರೋಗ್ಯ ಸಚಿವಾಲಯದ ಪ್ರಕಾರ ದೈನಂದಿನ ಪಾಸಿಟಿವಿಟಿ ದರ 0.40% ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ 0.40 % ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 3,84,499 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ. ಭಾರತ ಇದುವರೆಗೆ 78.30 ಕೋಟಿ ಕೋವಿಡ್ ಪರೀಕ್ಷೆಗಳನ್ನು ನಡೆಸಿದೆ.
ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 181.24 ಕೋಟಿ ಲಸಿಕೆಯನ್ನ ನೀಡಲಾಗಿದೆ.