ಬೆಂಗಳೂರಲ್ಲಿ ಇಂದು 15,617 ಕೊರೊನಾ ಕೇಸ್ ಪತ್ತೆ.. Coronavirus Cases Today in Bangalore saaksha tv
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಆಗಿ ಪರಿಣಮಿಸುತ್ತಿದೆ.
ಮಂಗಳವಾರ 10 ಸಾವಿರದ ಗಡಿದಾಟಿದ್ದ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ, ಇಂದು 15 ಸಾವಿರದ ಗಡಿದಾಟಿದೆ.
ಇವತ್ತು ನಗರದಲ್ಲಿ ಇಂದು 15,617 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದ್ದು, ಸಂಜೆ ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ನಲ್ಲಿ ಅಧಿಕೃತವಾಗಿ ಈ ಸಂಖ್ಯೆ ಪ್ರಕಟವಾಗಲಿದೆ.
ಮಂಗಳವಾರ ಬೆಂಗಳೂರಿನಲ್ಲಿ 10800 ಕೇಸ್ ಗಳು ಪತ್ತೆಯಾಗಿದ್ದವು. ಇಂದು 15617 ಪ್ರಕರಣಗಳು ದೃಢಪಟ್ಟಿವೆ.
ಇದರೊಂದಿಗೆ ಒಂದೇ ದಿನದಲ್ಲಿ 4,817 ಹೆಚ್ಚಿನ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಕೊರೊನಾ ಪಾಸಿಟಿವಿಟಿ ರೇಟ್ ಶೇ.15ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಕಂಟೈನ್ಮೆಂಟ್ ಜೋನ್ ಗಳನ್ನು ಹೆಚ್ಚಿಸಲಾಗುತ್ತಿದೆ. ಜೊತೆಗೆ ಕೋವಿಡ್ ಸೆಂಟರ್ ಗಳನ್ನು ಕೂಡ ಆರಂಭವಾಗಿವೆ.