ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಶ್ರೀಕಾಂತ್ ಪೂಜಾರಿ (Shrikanth Poojari) ಬಂಧನ ವಿರೋಧಿಸಿ ಬಿಜೆಪಿ ವ್ಯಾಪಕ ವಿರೋಧ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ ಪ್ರತಿಭಟನೆಯ ಕಾವು ಜೋರಾಗಿರುವ ಮಧ್ಯೆಯೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ಪ್ರತಿಕ್ರಿಯೆ ನೀಡಿದ್ದಾರೆ.
ಬಿಜೆಪಿ ಪ್ರತಿಭಟನೆ ಹಿನ್ನೆಲೆ ಶಹರ ಠಾಣೆಗೆ ಆಗಮಿಸಿದ್ದ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ, ಶ್ರೀಕಾಂತ್ ವಿರುದ್ಧ ಬೇರೆ ಬೇರೆ ಠಾಣೆಗಳಲ್ಲಿ ಕೇಸ್ ಗಳಿವೆ. ಅವರ ವಿರುದ್ಧ ಒಟ್ಟು 16 ಪ್ರಕರಣಗಳಿವೆ. ಅಕ್ರಮ ಸಾರಾಯಿ, ಮಟ್ಕಾ, ಜೂಜಾಟ ಸೇರಿ 16 ಕೇಸ್‌ಗಳಿವೆ ಎಂದು ಹೇಳಿದ್ದಾರೆ.
ಶಹರ ಠಾಣೆ ಮುಂದೆ ಪ್ರತಿಭಟನೆಗೆ ಬಿಜೆಪಿಗೆ ಸದ್ಯ ಯಾವುದೇ ಅನುಮತಿ ಇಲ್ಲ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಿದ್ದೇವೆ. ಮೆರವಣಿಗೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. 31 ವರ್ಷಗಳ ಬಳಿಕ ರಾಮಜನ್ಮಭೂಮಿ (Ram Janambhoomi) ಹೋರಾಟದ ಪ್ರಕರಣಕ್ಕೆ ಮರುಜೀವ ಸಿಕ್ಕಿರುವುದು ಕೂಡ ಹಲವಾರು ಚರ್ಚೆಗೆ ಕಾರಣವಾಗಿದೆ.
1992ರ ಡಿಸೆಂಬರ್ 5ರಂದು ಹುಬ್ಬಳ್ಳಿ ನಗರದಲ್ಲಿ ಗಲಭೆ (Hubballi Riots) ಸಂಭವಿಸಿತ್ತು. ಮಳಿಗೆಗೆ ಬೆಂಕಿ ಹಚ್ಚಿದ್ದ ಆರೋಪ ಸಂಬಂಧ 9 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಪೊಲೀಸರು ಮರು ಜೀವ ನೀಡಿದ್ದಾರೆ.








