ಕಳೆದ 24 ಗಂಟೇಲಿ ಕೊಡಗಿನಲ್ಲಿ 16 ಮಂದಿ ಕೊರೊನಾಗೆ ಬಲಿ Kodagu
ಮಡಿಕೇರಿ : ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 16 ಸೋಂಕಿತರು ಮೃತಪಟ್ಟಿದ್ದಾರೆ.
ಇದನ್ನ ಸ್ವತಃ ಜಿಲ್ಲಾಡಳಿತವೇ ಸ್ಪಷ್ಟಪಡಿಸಿದೆ. ಆದ್ರೆ ಇದಕ್ಕೆ ಅಸಲಿ ಕಾರಣವೇನು ಅಂತಾ ಇನ್ನೂ ಸ್ಪಷ್ಟಪಡಿಸಿಲ್ಲ.
ಈ ಮಧ್ಯೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮೃತ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ನಾಲ್ವರು ವೈದ್ಯರನ್ನು ತುರ್ತು ಸಭೆ ಕರೆದಿದ್ದಾರೆ. ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ತುರ್ತು ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕೊಡಗಿನಲ್ಲಿ ಕಳೆದ ಎರಡು ವಾರಗಳಿಂದ ಸೋಂಕಿತರು ಸಂಖ್ಯೆ ಜಾಸ್ತಿಯಾಗುತ್ತಿದೆ. ಜೊತೆಗೆ ಸೋಂಕಿನಿಂದ ಸಾವಿನ ಸಂಖ್ಯೆ ಕೂಡ ಹೆಚ್ಚಿದೆಯಾದರೂ, ಐದರಿಂದ ಆರು ಸೋಂಕಿತರು ಸಾವನ್ನಪ್ಪುತ್ತಿದ್ದರು.
ಈಗ ಕಳೆದ 24 ಗಂಟೆಯಲ್ಲಿ 16 ಜನರು ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.










