ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಹೊರತಾಗಿಯೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಒಂದೇ ದಿನ 17 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 277 ಕ್ಕೆ ತಲುಪಿದೆ. ಇಂದು ಒಂದೇ ದಿನ ಮೈಸೂರಿನಲ್ಲಿ ಬರೊಬ್ಬರಿ 10 ಪ್ರಕರಣಗಳು ವರದಿಯಾಗಿವೆ.
ಕಲಬುರಗಿಯಲ್ಲಿ ಒಂದು ವರ್ಷದ ಮಗುವಿಗೆ, ಬಾಗಲಕೋಟೆಯಲ್ಲಿ ಶಿಕ್ಷಕಿಯ ಪತಿ ಹಾಗೂ ಪೊಲೀಸ್ ಪೇದೆಗೆ. ವಿಜಯಪುರ, ಬೆಂಗಳೂರಿನಲ್ಲಿ ತಲಾ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ.
ಜಿಲ್ಲಾವಾರು ಇಂದು ವರದಿಯಾಗಿರುವ ಪ್ರಕರಣಗಳ ಬಗ್ಗೆ ಮಾಹಿತಿ ಹೀಗಿದೆ.
ಮೈಸೂರು: 10
ಬೆಂಗಳೂರು: 2
ಕಲಬುರಗಿ: 1
ವಿಜಯಪುರ: 2
ಬಾಗಲಕೋಟೆ: 2
ಇನ್ನು ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.







