ಬೆಂಗಳೂರು : ಇಂದು ಕೂಡ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದ್ದು, ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆ ಅವಧಿಯಲ್ಲಿ ರಾಜ್ಯದ 178 ಜನರಲ್ಲಿ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2711 ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ಬೆಂಗಳೂರು 10, ಬೆಂಗಳೂರು ಗ್ರಾಮಾಂತರ 1, ಯಾದಗಿರಿ 60, ರಾಯಚೂರು 62, ಕಲಬುರಗಿ 15, ಚಿಕ್ಕಬಳ್ಳಾಪುರ 4, ಉಡುಪಿ 15, ಮಂಡ್ಯ 2, ಮೈಸೂರು 2, ದಾವಣಗೆರೆ 4, ಶಿವಮೊಗ್ಗ 1, ಚಿತ್ರದುರ್ಗ 1 ಮತ್ತು ಧಾರವಾಡ 1 ಹೊಸ ಪ್ರಕರಣಗಳು ದೃಢಪಟ್ಟಿವೆ.
ಇನ್ನು ಕೊರೊನಾ ಸೋಂಕಿನಿಂದಾಗಿ ರಾಜ್ಯದಲ್ಲಿ ಒಟ್ಟು 47 ಜನರು ಸಾವನ್ನಪ್ಪಿದ್ದಾರೆ. ಇಂದು ರಾಜ್ಯದಲ್ಲಿ 35 ಜನ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 869 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 1793 ಆಕ್ಟಿವ್ ಕೇಸ್ ಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.








