ಶಿವಮೊಗ್ಗ: ಜಿಲ್ಲೆಯ ಹಲವೆಡೆ ವ್ಯಾಪಕ ಮಳೆಯಾಗಿದ್ದು, ಸಿಡಿಲಿಗೆ 18 ಮರಗಳು ಬಲಿಯಾಗಿರುವ ಘಟನೆ ನಡೆದಿದೆ.
ಅಲ್ಲದೇ, ಗುಡುಗು ಸಿಡಿಲಿಗೆ ಮರವೊಂದು ಉರುಳಿ ಬಿದ್ದು, ವಾಹನ ಸಂಚಾರಕ್ಕೆ ತೊಂದರೆ ಮಾಡಿದೆ. ಆಯನೂರು ಕೋಟೆ ಹತ್ತಿರ ಮೇಯಲು ಹೋಗಿದ್ದ ಜಾಕೀರ್ ಹುಸೇನ್ ಎಂಬ ವ್ಯಕ್ತಿಗೆ ಸೇರಿದ್ದ 18 ಕುರಿಗಳು ಸಿಡಿಲು ಬಡಿದು ಸಾವನ್ನಪ್ಪಿವೆ. ತಾಲೂಕಿನ ಕುಂಸಿ, ಆಯನೂರು, ಶಿವಮೊಗ್ಗ ಪಟ್ಟಣದ ವಿವಿಧೆಡೆ ಮಳೆಯಾಗಿದೆ.
ತೀರ್ಥಹಳ್ಳಿ, ಶಿಕಾರಿಪುರ ತಾಲೂಕಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿರುವ ಕುರಿತು ವರದಿಯಾಗಿದೆ. ಮಳೆಯಿಂದಾಗಿ ಜನ – ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ.