ಬೆಂಗಳೂರು: ಇಲ್ಲಿಯ ವೀರಭದ್ರ ನಗರದಲ್ಲಿ ನಿನ್ನೆ ನಡೆದಿದ್ದ ಬೆಂಕಿ ಅವಘಡದಲ್ಲಿ 19 ಬಸ್ ಗಳು ಸುಟ್ಟು ಕರಕಲಾಗಿದ್ದು, ಲಕ್ಷ ಲಕ್ಷ ಹಣ ಬೆಂಕಿಗೆ ಆಹುತಿಯಾಗಿವೆ.
ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಫ್ ಎಸ್ ಎಲ್, ಅಗ್ನಿಶಾಮಕ ಇಲಾಖೆ, ಆರ್ ಟಿಓ ಇಲಾಖೆಗಳ ವರದಿಗಾಗಿ ಕಾಯುತ್ತಿದ್ದಾರೆ.ಆಫೀಸ್ ನಲ್ಲಿ ಇಟ್ಟಿದ್ದ 8 ಲಕ್ಷ ರೂ. ಸಹ ಬೆಂಕಿಗಾಹುತಿ ಆಗಿರುವ ಕುರಿತು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಎಸ್‌ವಿ ಕೋಚ್ ವರ್ಕ್ಶಾಪ್ ಗ್ಯಾರೇಜ್‌ನಲ್ಲಿ ಈ ಅನಾಹುತ ಸಂಭವಿಸಿದೆ. ಬಸ್‌ನ ಟೈರ್, ಡೀಸೆಲ್ ಟ್ಯಾಂಕ್‌ಗಳು ಸ್ಫೋಟಗೊಂಡು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. 60ಕ್ಕೂ ಅಧಿಕ ಅಗ್ನಿಶಾಮಕ ಪಡೆಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ,








