ಫೇಸ್ ಬುಕ್ ನಲ್ಲಿ ಅಪ್ರಾಪ್ತ ಹುಡುಗಿಯನ್ನ ಪರಿಚಯ ಮಾಡಿಕೊಂಡಿದ್ದ 19 ವರ್ಷದ ಯುವಕ ಆಕೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.
ಅತ್ಯಾಚಾರವೆಸಗಿದ ಆರೋಪಿ ಸೂರ್ಯ ಅಲಿಯಾಸ್ ದತ್ತಾ ಬಾಬುರಾವ್ ಜಂಭುಲ್ಕರ್ ನನ್ನ ಪೊಲೀಸರು ಅರೆಸ್ಟ್ ಮಾಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಇನ್ನೂ ಈತ ಈ ಹಿಂದೆಯೂ ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ಕೇಸ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ಅಜ್ಜಿ ಸಂಬಂಧಿಕರ ಮನೆಗೆ ತೆರಳಿದ್ದಾಗ ಅಪ್ರಾಪ್ತೆ ಮನೆಗೆ ಬಂದಿರುವ ಆರೋಪಿ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಅಪ್ರಾಪ್ತೆಯೂ ತನ್ನ ಅಜ್ಜಿಗೆ ಹೇಗೋ ಕರೆ ಮಾಡಿದ್ದಾಳೆ. ಆಗ ಆಕೆಯ ಅಜ್ಜಿ ಆರೋಪಿ ಬಳಿ ಆಕೆಯನ್ನ ಬಿಟ್ಟುಬಿಡುವಂತೆ ಬೇಡಿಕೊಂಡಿದ್ದಾಲೆ. ಆದ್ರೆ ಆತ ಒಪ್ಪದೇ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ.
ಬಳಿಕ ಸಂತ್ರಸ್ತೆಯ ಅಜ್ಜಿ ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.