ದಾವಣಗೆರೆ: ಯುವತಿಯೊಬ್ಬಳು ತನ್ನ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಲು ವ್ಯಕ್ತಿಯೊಬ್ಬನಿಗೆ ಸಹಕರಿಸಿ ಕತೆ ಕಟ್ಟಿ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಚನ್ನಗಿರಿ (Channagiri) ಪೊಲೀಸರು (Police) ಬಂಧಿಸಿದ್ದಾರೆ. ಬಂಧಿತರನ್ನು ತಸ್ಮೀಯಖಾನಂ ಹಾಗೂ ಮುಜೀಬುಲ್ಲಾ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ ಸುಮಾರು 10.77 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಚನ್ನಗಿರಿ ತಾಲೂಕಿನ ಅಗರಬನ್ನಿಹಟ್ಟಿ ಗ್ರಾಮದ ಅಮಾನುಲ್ಲಾ ಎಂಬವರ ಮನೆಯಲ್ಲಿ ಕಳ್ಳತನವಾಗಿತ್ತು. ಅಮಾನುಲ್ಲಾ ಅವರ ಪುತ್ರಿ ತಸ್ಮೀಯಖಾನಂ ಮನೆಯಲ್ಲಿ ಒಬ್ಬಳೇ ಇದ್ದಾಗ ಈ ಘಟನೆ ನಡೆದಿತ್ತು. ಒಂಟಿಯಾಗಿದ್ದಾಗ ನೀರು ಹಾಕಿ ಪ್ರಜ್ಞೆ ತಪ್ಪಿಸಿ, ಕಳ್ಳತನ ಮಾಡಿದ್ದಾರೆ ಎಂದು ಹೇಳಿದ್ದಳು. ಆದರೆ, ಪೊಲೀಸರು ಈ ಪ್ರಕರಣ ಬೇಧಿಸಿದ್ದಾರೆ.