ಟೆಸ್ಟ್ ಕ್ರಿಕೆಟ್ ಗೆ ಶ್ರೇಯಸ್ ಅಯ್ಯರ್ ಪದಾರ್ಪಣೆ shreyas-iyer saaksha tv
ಕಾನ್ಪುರ : ಟೀಂ ಇಂಡಿಯಾದ ರೈಸಿಂಗ್ ಸ್ಟಾರ್, ಮುಂಬೈ ಬ್ಯಾಟರ್ ಶ್ರೇಯಸ್ ಅಯ್ಯರ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಇಂದಿನಿಂದ ಆರಂಭವಾಗಿದೆ. ಕಾನ್ಪುರದಲ್ಲಿ ನಡೆಯುತ್ತಿರುವ ಕಿವೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೇಯಸ್ ಟೆಸ್ಟ್ ಕ್ಯಾಪ್ ತೊಟ್ಟಿದ್ದಾರೆ.
ಭಾರತೀಯ ಕ್ರಿಕೆಟ್ ನ ದಂತಕತೆ ಸುನಿಲ್ ಗವಾಸ್ಕರ್ ಅವರು ಶ್ರೇಯಸ್ ಗೆ ಟೆಸ್ಟ್ ಕ್ಯಾಪ್ ನೀಡಿ ಶುಭ ಕೋರಿದರು. ಈ ವೇಳೆ, ತಂಡದ ಇತರ ಆಟಗಾರರು ಅಯ್ಯರ್ ಗೆ ಚಪ್ಪಾಳೆ ಮೂಲಕ ಹುರಿದುಂಬಿಸಿದರು.
ಅಂದಹಾಗೆ ಶ್ರೇಯಸ್, 2017ರ ಡಿಸೆಂಬರ್ 10ರಂದು ಶ್ರೀಲಂಕಾ ವಿರುದ್ಧ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದರು.
ಇನ್ನು ಪಂದ್ಯದಲ್ಲಿ ಟಾಸ್ ಗೆದ್ದ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಸದ್ಯ ಭಾರತ ತಂಡ 70 ರನ್ ಗೆ 1 ವಿಕೆಟ್ ಕಳೆದುಕೊಂಡಿದೆ. ಭಾರತದ ಪರ ಮಯಾಂಕ್ 13 ರನ್ ಗಳಿಸಿ ಔಟ್ ಆಗಿದ್ದಾರೆ.
🎥 A moment to cherish for @ShreyasIyer15 as he receives his #TeamIndia Test cap from Sunil Gavaskar – one of the best to have ever graced the game. 👏 👏#INDvNZ @Paytm pic.twitter.com/kPwVKNOkfu
— BCCI (@BCCI) November 25, 2021









