ರಾಜ್ಯದಲ್ಲಿ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ಪರೀಕ್ಷೆ ರದ್ದು ?
ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ಕಳೆದ ಬಾರಿಯಂತೆ ರದ್ದು ಮಾಡುವ ಬಗ್ಗೆ ಸೋಮವಾರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಬಾರಿಯೂ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳ ಪರೀಕ್ಷೆಗಳು ಕಳೆದ ಬಾರಿಯಂತೆ ರದ್ದಾಗುವ ಸಾಧ್ಯತೆಯಿದೆ ಎಂಬ ಸುಳಿವನ್ನು ಸುಧಾಕರ್ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ಸೋಂಕು ಕಳೆದ ಎರಡು ವಾರದಿಂದ ನಿಧಾನಗತಿಯಲ್ಲಿ ಏರಿಕೆಯಾಗಿದೆ. ಮುಂದಿನ ಎರಡು ತಿಂಗಳಲ್ಲಿ ಸೋಂಕಿನ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ ಎಂದು ಹೇಳಿದರು.
1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕಳೆದ ಬಾರಿಯಂತೆ ಪರೀಕ್ಷೆಗಳನ್ನು ನಡೆಸದೆ ಉತ್ತೀರ್ಣ ಮಾಡುವ ಬಗ್ಗೆ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗುವುದು. ಅಂತಿಮವಾಗಿ ಮುಖ್ಯಮಂತ್ರಿಗಳೇ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ಒಂದೇ ಕಡೆ ಕುಳಿತು ಪರೀಕ್ಷೆ ಬರೆಯುವ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ. ಇದನ್ನು ತಡೆಗಟ್ಟಲು ಕೆಲವು ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಗೋಡಂಬಿ ಹಾಲಿನ ಆರೋಗ್ಯ ಪ್ರಯೋಜನಗಳು ಮತ್ತು ತಯಾರಿಸುವ ವಿಧಾನ#healthtips #cashew #health #milk https://t.co/ScQrX4nnSF
— Saaksha TV (@SaakshaTv) March 22, 2021
ಹೈದರಾಬಾದಿ ಮಟನ್ ದಮ್ ಬಿರಿಯಾನಿ#recipes #muttonbiryani #food https://t.co/rdecTf9drv
— Saaksha TV (@SaakshaTv) March 22, 2021
ಎಲ್‌ಟಿಸಿ ನಗದು ಚೀಟಿ ಯೋಜನೆಯನ್ನು ಹೇಗೆ ಪಡೆಯುವುದು ? ಇಲ್ಲಿದೆ ಮಾಹಿತಿ https://t.co/QYkGNiqfNC
— Saaksha TV (@SaakshaTv) March 22, 2021
ಆಲಿಯಾ ಯಾವತ್ತೂ ಮದುವೆಯಾಗಬಾರದು ಎಂದು ಬೆದರಿಕೆ ಹಾಕಿದ ಮಹೇಶ್ ಭಟ್ https://t.co/N0tImKAtRF
— Saaksha TV (@SaakshaTv) March 21, 2021
#Karnataka #examcanceled