ತರಕಾರಿ ವಾಹನದಲ್ಲಿ ಕೇರಳಕ್ಕೆ ಅಕ್ರಮವಾಗಿ ನಿಷೇಧಿತ ಹನ್ಸ್ ಸಾಗಾಣಿಕೆ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗವಾದ ಸುಲ್ತಾನ್ ಬತ್ತೇರಿಯಲ್ಲಿ ಹನ್ಸ್ ಸಾಗಾಣಿಕೆ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಂಧಿತ ಆರೋಪಿಗಳು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನವರಾಗಿದ್ದು, ಭೀಮನಬೀಡು ಗ್ರಾಮದ ಕೃಷ್ಣ, ಮಲ್ಲು ಬಂಧಿತರಾಗಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧಿತರಿಂದ 8 ಲಕ್ಷ ಮೌಲ್ಯದ ಹನ್ಸ್ ಪ್ಯಾಕೇಟ್ ಜಪ್ತಿ ಮಾಡಿದ್ದಾರೆ.









