ಕಲಬುರಗಿ: ಚುನಾವಣೆ ಹೊತ್ತಲ್ಲಿ ಹಣ ಪತ್ತೆ ಹಚ್ಚುವ ಕಾರ್ಯವನ್ನು ಅಧಿಕಾರಿಗಳು ಮಾಡುತ್ತಲೇ ಇದ್ದಾರೆ. ಮತದಾರರನ್ನು ಸಳೆಯುವುದಕ್ಕಾಗಿ ಹಲವರು ವಿಭಿನ್ನ ರೀತಿಯಲ್ಲಿ ಹಣ ಸಾಗಿಸಿ, ಸಿಕ್ಕಿ ಹಾಕಿಕೊಂಡಿರುವ ಸಾಕಷ್ಟು ಉದಾಹರಣೆಗಳು ನಡೆದಿವೆ. ಈ ಮಧ್ಯೆ ಕಾಂಗ್ರೆಸ್ ನಾಯಕರೊಬ್ಬರಿಗೆ ಸೇರಿದ್ದ 2 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿದೆ.
ಆದಾಯ ತೆರಿಗೆ (Income Tax) ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ‘ಕೈ’ (Congress) ನಾಯಕರಿಗೆ ಸೇರಿದ ಕಾರಿನಲ್ಲಿ ಪತ್ತೆಯಾದ 2 ಕೋಟಿಗೂ ಅಧಿಕ ಹಣ ಸೀಜ್ ಮಾಡಿದ್ದಾರೆ.
ಕಲಬುರಗಿ (Kalaburagi) ರೈಲ್ವೆ ನಿಲ್ದಾಣದಿಂದ ಹಣ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೇರೆ ರಾಜ್ಯದಿಂದ ರೈಲಿನ ಮೂಲಕ ಕಲಬುರಗಿ ರೈಲು ನಿಲ್ದಾಣಕ್ಕೆ ಹಣ ತರಲಾಗಿತ್ತು. ರೈಲಿನಿಂದ ಕಾರಿನಲ್ಲಿ ಹಣ ಸಾಗಾಟ ಮಾಡಲಾಗಿದೆ ಎಂದು ಐಟಿ ಅಧಿಕಾರಿಗಳು ಹೇಳಿದ್ದಾರೆ.
ಆದಾಯ ತೆರಿಗೆ ಅಧಿಕಾರಿಗಳು ಈಗಾಗಲೇ ಹಣ ಸೀಜ್ ಮಾಡಿದ್ದು, ಕಲಬುರಗಿಯ ಖರ್ಗೆ ಸರ್ಕಲ್ ಬಳಿ ಹಣದ ಸಮೇತ ಕಾರು ಸೀಜ್ ಮಾಡಿದ್ದಾರೆ.