ರಾಜ್ಯದಲ್ಲಿ 2 ಡೆಲ್ಟಾ ಪ್ಲಸ್ ಕೇಸ್ ಪತ್ತೆ Delta Plus
ಬೆಂಗಳೂರು : ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ಕೇಸ್ ಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಡೆಲ್ಟಾ ಪ್ಲಸ್ ಕೇಸ್ ಬಗ್ಗೆ ಮಾಹಿತಿ ನೀಡಿದ್ದು, ನಿನ್ನೆ ಮೈಸೂರಿನಲ್ಲಿ ಒಂದು ಕೇಸ್ ಮತ್ತೆ ಆಗಿತ್ತು.
ಈಗ ಬೆಂಗಳೂರಿನಲ್ಲಿ ಹಿರಿಯ ವ್ಯಕ್ತಿಯೊಬ್ಬರಿಗೆ ಡೆಲ್ಟಾ ಪ್ಲಸ್ ಸೋಂಕು ಕಂಡು ಬಂದಿದೆ. ಅವರ ಮೇಲೆ ತೀವ್ರ ನಿಗಾ ಇಡಲಾಗಿದೆ.
ಅವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದವರನ್ನ ಪರೀಕ್ಷೆ ಮಾಡಲಾಗಿದ್ದು, ಇಂದು ವರದಿ ಬರಲಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಡೆಲ್ಟಾ ಪ್ಲಸ್ ವೈರಸ್ ಕುರಿತು ಯಾರು ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಆರೋಗ್ಯ ಸಚಿವರು, ಡೆಲ್ಟಾ ಪ್ಲಸ್ ಮತ್ತು ಡೆಲ್ಟಾ ವೈರಸ್ ಒಂದೇ ಗುಣಲಕ್ಷಣ ಹೊಂದಿದೆ. ಆದರೆ ಚಿಕಿತ್ಸೆ ವಿಧಾನ ಸ್ವಲ್ಪ ಬೇರೆ ಇದೆ ಎಂದು ಸ್ಪಷ್ಟಪಡಿಸಿದರು.








