ನವದೆಹಲಿ: ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆ ಮಾಡಿವೆ.
ಪರಿಷ್ಕೃತ ದರ ಮಾರ್ಚ್ 15ರ ಬೆಳಿಗ್ಗೆ 6 ಗಂಟೆಯಿಂದಲೇ ಜಾರಿಯಾಗಿದೆ. ಬೆಲೆ ಇಳಿಕೆಯಿಂದ 58 ಲಕ್ಷ ಸರಕು ವಾಹನ, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳ ನಿರ್ವಹಣಾ ವೆಚ್ಚ ಕಡಿಮೆ ಮಾಡುತ್ತದೆ ಎಂದು ಪೆಟ್ರೋಲಿಯಂ ಸಚಿವಾಲಯ ಹೇಳಿದೆ.
ಇತ್ತೀಚೆಗಷ್ಟೇ ಮಹಿಳಾ ದಿನಾಚರಣೆಯಂದು ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್ಪಿಜಿ ದರ ಇಳಿಕೆ ಮಾಡಿತ್ತು.