ಕಣಿವೆ ನಾಡಿನಲ್ಲಿ ಉಗ್ರರು ವಿದ್ವಂಸಕ ಕೃತ್ಯಗಳನ್ನು ಮುಂದುವರೆಸಿದ್ದಾರೆ. ಇಂದು ಜಮ್ಮು ಮತ್ತು ಕಾಶ್ಮೀರದ ನೌಗಾಮ್ನಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಶ್ರೀನಗರದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ವೇಳೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಈ ದಾಳಿಯ ಹಿಂದೆ ಜೈಷ್-ಇ- ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳು ಮೊಕ್ಕಾಂ ಹೂಡಿ ಕಾರ್ಯಾಚರಣೆ ಶುರುಮಾಡಿದ್ದಾರೆ.
ವರಮಹಾಲಕ್ಷ್ಮಿ ವ್ರತದ ದಿನದಂದು ಎಂಟು ಒಂದು ರೂಪಾಯಿ ನಾಣ್ಯಗಳನ್ನು ಇಟ್ಟು ಅಷ್ಟಲಕ್ಷ್ಮಿ ದೇವತೆಗಳ ಆಶೀರ್ವಾದವನ್ನು ಪಡೆಯುವ ಮೂಲಕ ಮಾಡಬಹುದಾದ ತಾಂತ್ರಿಕ ಪರಿಹಾರ.
ಅಷ್ಟ ಐಶ್ವರ್ಯ ಪಡೆಯಲು ತಾಂತ್ರಿಕ ಪರಿಹಾರ ಅಷ್ಟ ಲಕ್ಷ್ಮಿ ನಾಣ್ಯಗಳು ಶುಕ್ರವಾರ ಮಹಾಲಕ್ಷ್ಮಿ ದೇವಿಗೆ ಶುಭ ದಿನ. ಆ ಶುಕ್ರವಾರ ಬರುವ ಶುಕ್ರ ಹೊರೆಯ ಸಮಯದಲ್ಲಿ ನಾವು...








