2 PUC RESULT – ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದ ಟಾಪರ್ಸ್ ಪಟ್ಟಿ…
2021-22ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು (ಜೂನ್ 18) ಪ್ರಕಟಗೊಂಡಿದ್ದು ಶೇಕಡಾ 61.88ರಷ್ಟು ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.
ಕಲಾ ವಿಭಾಗದಲ್ಲಿ ಬಳ್ಳಾರಿಯ ಶ್ವೇತಾ ಭೀಮಶಂಕರ ಬೈರಗೊಂಡ ಮತ್ತು ಕೊಟ್ಟೂರಿನ ಸಹನಾ ಮಡಿವಾಳರ್ 600ಕ್ಕೆ 594 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮಾನವ ವಿನಯ್ ಕೇಜ್ರಿವಾಲ್,ನೀಲು ಸಿಂಗ್, ಆಕಾಶ್ ದಾಸ್ ಮತ್ತು ನೇಹಾ ಬಿ ಆರ್ 596 ಹಾಗೂ ವಿಜ್ಞಾನ ವಿಭಾಗದಲ್ಲಿ ಸೀಮ್ರಾನ್ ಶೇಷರಾವ್, ಇಲಂ ಮೊಹಮ್ಮದ್ ರಫೀಕ್, ಸಾಯಿ ಚಿರಾಗ್, ಶ್ರೀಕೃಷ್ಣ ಪೇಜತಾಯ 598 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಮೊದಲಿಗರಾಗಿ ಹೊರಹೊಮ್ಮಿದ್ದಾರೆ.
ಜಿಲ್ಲಾವಾರು ಫಲಿತಾಂಶದಲ್ಲಿ ದಕ್ಷಿಣ ಕನ್ನಡ (88.02) ಮೊದಲ ಸ್ಥಾನ ಪಡೆದಿದ್ದರೆ, ಉಡುಪಿ ಜಿಲ್ಲೆ ( 86.38) ಎರಡನೇ ಸ್ಥಾನ ಪಡೆದಿದೆ.ವಿಜಯಪುರ ಮೂರನೇ ಸ್ಥಾನ, ಬೆಂಗಳೂರು ದಕ್ಷಿಣ 4, ಉತ್ತರ ಕನ್ನಡ 5 ನೇ ಸ್ಥಾನ ಗಳಿಸಿದರೆ ಶೇ 49.31 ಫಲಿತಾಂಶ ಪಡೆದಿರುವ ಚಿತ್ರದುರ್ಗ ಕೊನೆಯ ಸ್ಥಾನದಲ್ಲಿದೆ.








