ವಿಜಯಪುರ : ರಾಜ್ಯದಲ್ಲಿ ಕೊರೊನಾಸುರನ ಅಟ್ಟಹಾಸ ಮುಂದುವರೆದಿದೆ. ಈಗಾಗಲೇ ಸೋಂಕಿತರ ಸಂಖ್ಯೆ 388ಕ್ಕೆ ಏರಿಕೆಯಾಗಿದೆ. ರಾಜ್ಯದ ವಿಜಯಪುರ ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಜೊತೆಗೆ ಒಂದೇ ಏರಿಯಾದಲ್ಲಿ 20 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ. ಒಂದೇ ಏರಿಯಾದ 5 ಕುಟುಂಬಗಳಿಗೆ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ 5 ಕುಟುಂಬದ 20 ಜನರನ್ನು ಮತ್ತು ಅವರ ಸಂಬಂಧಿಕರನ್ನು ಕ್ವಾರೆಂಟೈನ್ ನಲ್ಲಿ ಇಡಲಾಗಿದೆ. ಸರ್ಕಾರಿ ಬಸ್ಗಳಲ್ಲಿ 20 ಜನರನ್ನು ಶಿಫ್ಟ್ ಮಾಡಲಾಗಿದೆ. ಕೊರೋನಾ ಪೀಡಿತರ ಸಂಪರ್ಕದಲ್ಲಿದ್ದ ಪ್ರೈಮರಿ ಹಾಗೂ ಸೆಕಂಡರಿ ಸಂಪರ್ಕದಲ್ಲಿರುವವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಈ ಪ್ರದೇಶದ ಸುತ್ತಮುತ್ತಲಿನ ಸುಮಾರು 1000 ಜನರ ಗಂಟಲು ದ್ರವ ಪರೀಕ್ಷೆ ಮಾಡಲು ವಿಜಯಪುರ ಜಿಲ್ಲಾಡಳಿತ ಮುಂದಾಗಿದೆ. ಈ ಮೂಲಕ ಕೊರೋನಾ ಸೋಂಕು ಹರಡದಂತೆ ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ಪೀಡಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ವಿಜಯಪುರ ಜಿಲ್ಲಾಡಳಿತ ಚಪ್ಪರಬಂದ್ ಕಾಲನಿ ಸೇರಿದಂತೆ ಗೋಳಗುಮ್ಮಟ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಿದೆ.
ಅರವಿಂದ ಅವೇಂಜರ್ಸ್ಗೆ ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿ
ಬೆಂಗಳೂರು: ಅಮೋಘ ಆಟ ಪ್ರದರ್ಶಿಸಿದ ಅರವಿಂದ ಅವೇಂಜರ್ಸ್ ತಂಡವು ಬಿ ಝೆಡ್ ಕಪ್ ಮೀಡಿಯಾ ಕ್ರಿಕೆಟ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. 9ಡ್ರೀಮ್ಸ್ ಸಂಸ್ಥೆ ಆಯೋಜಿಸಿದ್ದ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ...








