ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವಿರುದ್ಧ ಹೋರಾಟಕ್ಕೆ 20 ಲಕ್ಷ ಕೋಟಿ ರೂ ಆರ್ಥಿಕ ಪ್ಯಾಕೆಜ್ ಘೋಷಣೆ ಮಾಡಿದರು.
ಕೊರೋನಾ ಎಂಬ ವೈರಸ್‍ನಿಂದ ವಿಶ್ವದ ಎಲ್ಲಾ ರಾಷ್ಟ್ರಗಳು ಕಂಗಾಲಾಗಿದ್ದು, ಜನರ ಜೀವ ಉಳಿಸುವುದಕ್ಕಾಗಿ ಹೋರಾಡುತ್ತಿವೆ. ಜಗತ್ತೇ ಸಂಕಷ್ಟವನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಇದರಿಂದ ಹೊರಬರಲು ನಮ್ಮೆಲ್ಲರ ಸಂಕಲ್ಪ ಮತ್ತಷ್ಟು ಕಠಿಣ ಮತ್ತು ದೃಢವಾಗಬೇಕಿದೆ, ಎಲ್ಲರೂ ಒಗ್ಗಟ್ಟಿನಿಂದ ಕೊರೊನಾ ವಿರುದ್ಧ ಹೋರಾಡಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟರು.
ಕಳೆದ ನಾಲ್ಕು ತಿಂಗಳಿನಿಂದ ಕೊರೋನಾ ಜಗತ್ತಿನಾದ್ಯಂತ ಮರಣಮೃದಂಗ ಬಾರಿಸುತ್ತಿದ್ದು, ಲಕ್ಷಾಂತರ ಜನರು ಮೃತಪಟ್ಟಿದ್ದಾರೆ. ಜಗತ್ತಿನ ಎಲ್ಲಾ ರಾಷ್ಟ್ರಗಳು ಕಠಿಣ ಕ್ರಮಗಳನ್ನು ಕೈಗೊಂಡು ಜೀವ ಉಳಿಸಲು ಪ್ರಯತ್ನಿಸುತ್ತಿದೆ. ಈ ಪರಿಸ್ಥಿತಿಯಲ್ಲಿ ಕೊರೋನಾ ವಿರುದ್ಧ ನಮ್ಮನ್ನು ರಕ್ಷಿಸಿಕೊಳ್ಳುತ್ತಾ ನಾವು ಮುಂದೆ ಸಾಗಬೇಕಿದೆ.
ಮೊದಲು ಭಾರತದಲ್ಲಿ ಎನ್-95 ಮಾಸ್ಕ್ ಗಳ ಉತ್ಪಾದನೆ ಬೆರಳಿಣಿಕೆಯಲ್ಲಿ ಆಗುತ್ತಿತ್ತು. ಇಂದು ಪ್ರತಿದಿನ 2 ಲಕ್ಷಕ್ಕೂ ಅಧಿಕ ಪಿಪಿಇ ಕಿಟ್, ಮಾಸ್ಕ್ ಗಳ ಉತ್ಪಾದನೆ ಆಗುತ್ತಿದೆ. ಕೊರೋನಾದಿಂದ ನಾವು ಬದಲಾಗಿರುವುದಕ್ಕೆ ಈ ಉತ್ಪಾದನೆ ಒಂದು ಸ್ಪಷ್ಟ ಉದಾಹರಣೆ.
ವಿಶ್ವವೇ ಒಂದು ಎಂಬ ಸಂದೇಶ ಸಾರಿದ ಸಂಸ್ಕೃತಿ ಮತ್ತು ಸಂಸ್ಕಾರ ನಮ್ಮದು. ಇಡೀ ವಿಶ್ವವೇ ನಮ್ಮ ಆತ್ಮ. ಹಾಗಾಗಿ ವಿಶ್ವದ ಕಲ್ಯಾಣವೇ ಭಾರತವಾಗಿದೆ.ಇದರಿಂದಾಗಿ ಇಡೀ ವಿಶ್ವ ಭಾರತದೆಡೆ ನಮ್ಮ ದೃಷ್ಟಿ ನೆಟ್ಟಿದೆ. ಭಾರತ ಬಯಲು ಮುಕ್ತ ಶೌಚವಾದಾಗ, ಮಾನವ ಸಂಕುಲದ ಅಭಿವೃದ್ಧಿಗೆ ಭಾರತ ಉತ್ತಮ ಕೆಲಸ ಮಾಡುತ್ತಿದೆ ಎಂದು ವಿಶ್ವವೇ ನಂಬಿಕೆ ಇಟ್ಟಿತ್ತು. ವಿಶ್ವದ ಬೆಳವಣಿಗೆಗೆ ಭಾರತದ ಪ್ರಗತಿ ಪೂರಕವಾಗಿದೆ. ಭಾರತ ಸಮೃದ್ಧ, ಚಿನ್ನದ ನಾಡಾಗಿದ್ದ ಸಮಯದಿಂದಲೂ ವಿಶ್ವದ ಕಲ್ಯಾಣಕ್ಕಾಗಿ ಶ್ರಮಿಸಿದೆ. ಆದರೆ ಗುಲಾಮಗಿರಿಯಿಂದಾಗಿ ಭಾರತ ನಲುಗಿತು.
ಇಂದು ನಮ್ಮ ಬಳಿ ತಂತ್ರಜ್ಞಾನ, ಜ್ಞಾನ, ಪ್ರತಿಭಾನ್ವಿತರು ಎಲ್ಲವೂ ಇದೆ. ನಾವೆಲ್ಲರೂ ಜೊತೆಯಾಗಿ ಉತ್ತಮ ಉತ್ಪನ್ನಗಳನ್ನು ತಯಾರಿಸೋಣ. ಸ್ವಾವಲಂಬಿ ಭಾರತ ಆರ್ಥಿಕತೆ, ಮೂಲಭೂತ ಸೌಕರ್ಯ, ವ್ಯವಸ್ಥೆ, ಪ್ರಜಾಪ್ರಭುತ್ವ ಮತ್ತು ಬೇಡಿಕೆ-ಪೂರೈಕೆ ಎಂಬ ಐದು ಆಧಾರ ಸ್ತಂಭಗಳ ಮೇಲೆ ನಿಂತಿದೆ ಎಂದು ಪ್ರಧಾನಿ ಹೇಳಿದರು.
ಭಾರತದ ಆರ್ಥ ವ್ಯವಸ್ಥೆಯ ಚೇತರಿಕೆಗಾಗಿ 20 ಲಕ್ಷ ಕೋಟಿಯ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ ಪ್ರಧಾನಿ ಇದರಿಂದ ಸಣ್ಣ ಉದ್ಯಮ, ಗೃಹ ಉದ್ಯಮ, ಲಘು ಉದ್ಯಮ, ಮಧ್ಯಮ ಉದ್ಯಮ, ಕಾರ್ಮಿಕರು, ರೈತರು, ಮಧ್ಯಮ ವರ್ಗದ ಜನರಿಗೆ ಈ ಪ್ಯಾಕೇಜ್ ಲಾಭ ಸಿಗಲಿದೆ. ದೇಶಕ್ಕಾಗಿ ತೆರಿಗೆ ಪಾವತಿಸುವವರಿಗಾಗಿ ಕೂಡ ಈ ಪ್ಯಾಕೇಜ್ ನಲ್ಲಿ ಲಾಭ ಸಿಗಲಿದ್ದು, ನಾಳೆ ಹಣಕಾಸು ಸಚಿವರು ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದರು.
ಲಾಕ್‍ಡೌನ್ ನಿಂದಾಗಿ ರಸ್ತೆ ಬದಿ ವ್ಯಾಪಾರಿಗಳು, ಪುಟ್ಟ ಅಂಗಡಿ ನಡೆಸುವವರು, ಮೀನುಗಾರರು, ಸಣ್ಣ ವ್ಯಾಪಾರಿಗಳು ತುಂಬ ಕಷ್ಟ ಅನುಭವಿಸಬೇಕಾಯಿತು ಎಂದ ಪ್ರಧಾನಿ ಇದೀಗ ನಾವೆಲ್ಲರೂ ಒಟ್ಟಾಗಿ ಇವರನ್ನು ಮೇಲೆತ್ತಬೇಕಾಗಿದೆ. ಈ ಅರ್ಥಿಕ ಪ್ಯಾಕೇಜ್ ಇವರೆಲ್ಲರ ಬದುಕಿಗೆ ಬೆಳಕಾಗಲಿ. ಪ್ರತಿ ಭಾರತೀಯರೂ ಸ್ವದೇಶೀ ವಸ್ತುಗಳನ್ನು ಖರೀದಿಸುವ ಮತ್ತು ಇತರರನ್ನು ಖರೀದಿಸುವಂತೆ ಪ್ರೇರೇಪಿಸುವ ಶಪಥ ಮಾಡೋಣ.
ಕೊರೋನಾ ಸೋಂಕು ಬಹಳ ದೀರ್ಘ ಕಾಲದವರೆಗೆ ಇರಲಿದ್ದು, ಲಾಕ್‍ಡೌನ್ ನಾಲ್ಕನೇ ಹಂತ ಮೇ 18ರ ಬಳಿಕ ಹೊಸ ರೀತಿಯಲ್ಲಿ ಜಾರಿಯಾಗಲಿದೆ. ಮಾಸ್ಕ್ ಧರಿಸುವ ಮೂಲಕ ನಾವೆಲ್ಲರೂ ಕೊರೋನಾ ವಿರುದ್ಧ ಹೋರಾಡೋಣ ಎಂದರು.
ರಿಲಯನ್ಸ್ ಡಿಜಿಟಲ್ ತಂದಿದೆ ‘ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್
ರಿಲಯನ್ಸ್ ಡಿಜಿಟಲ್ ತಂದಿದೆ 'ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್ (D.I.S.C.O.)' ಸ್ಮಾರ್ಟ್ಫೋನ್ಗಳು, ಗೃಹೋಪಯೋಗಿ ವಸ್ತುಗಳು, ಟಿವಿಗಳು, ಲ್ಯಾಪ್ ಟಾಪ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ಸ್ ಗಳ ಮೇಲೆ ವಿಶೇಷ ಕೊಡುಗೆಗಳು ಮುಂಬೈ, 2026: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ರಿಟೇಲರ್ ರಿಲಯನ್ಸ್ ಡಿಜಿಟಲ್, ತನ್ನ ಅಪ್ರತಿಮ ಡಿಜಿಟಲ್ ಇಂಡಿಯಾ ಸೇಲ್ಗಾಗಿ ಹೊಸ ಗುರುತನ್ನು D.I.S.C.O. (ಡಿಜಿಟಲ್ ಇಂಡಿಯಾ ಸೇಲ್ ಕ್ರೇಜಿ ಆಫರ್ಸ್) ಅನ್ನು ಪ್ರಾರಂಭಿಸಿದೆ. ರಿಲಯನ್ಸ್ ಡಿಜಿಟಲ್ ಸ್ಟೋರ್ಸ್, RelianceDigital.in ಮತ್ತು ಮೈಜಿಯೋ ಸ್ಟೋರ್ಸ್ನಲ್ಲಿ ಆಗಸ್ಟ್ 16 ರವರೆಗೆ ಚಾಲನೆಯಲ್ಲಿರುವ ಈ ಅಭಿಯಾನವು ಸ್ಮಾರ್ಟ್ಫೋನ್ಗಳು, ಟಿವಿಗಳು, ಲ್ಯಾಪ್ಟಾಪ್, ಗೃಹೋಪಯೋಗಿ ವಸ್ತುಗಳು ಮತ್ತು ಹೆಚ್ಚಿನವುಗಳ ಮೇಲೆ ವಿಶೇಷ ಕೊಡುಗೆಗಳನ್ನು ತಂದಿದೆ. ಗ್ರಾಹಕ ಎಲೆಕ್ಟ್ರಾನಿಕ್ಸ್ ಮತ್ತು ಉಪಕರಣಗಳ ಮೇಲಿನ ಋತುವಿನ ಕೆಲವು ಅತ್ಯುತ್ತಮ ಡೀಲ್ ಗಳನ್ನು ಒಟ್ಟುಗೂಡಿಸುವ ಈ ಮಾರಾಟವು ಹಳೆಯ ಉತ್ಪನ್ನಗಳ ಮೇಲೆ ವರ್ಧಿತ ವಿನಿಮಯ ಮೌಲ್ಯ, ಆಯ್ದ ಎಲೆಕ್ಟ್ರಾನಿಕ್ಸ್ ಮೇಲೆ ₹ 15,000 ವರೆಗೆ ಎಕ್ಸ್ಚೇಂಜ್ ಬೋನಸ್, ಎರಡನೇ ಉತ್ಪನ್ನದ ಖರೀದಿಗೆ ಫ್ಲಾಟ್ 50% ರಿಯಾಯಿತಿ, ಬ್ಯಾಂಕ್ ಕಾರ್ಡ್ಗಳು, ಪೇಪರ್ ಫೈನಾನ್ಸ್ ಮತ್ತು ಯುಪಿಐ ಮೂಲಕ ₹ 30,000 ವರೆಗೆ ರಿಯಾಯಿತಿ ಮತ್ತು ಮಾರಾಟದ ಸಮಯದಲ್ಲಿ ಪೂರಕ ಒಂದು ವರ್ಷದ ವಿಸ್ತೃತ ವಾರಂಟಿಯನ್ನು ನೀಡುತ್ತದೆ. ನಿಮ್ಮ ಸ್ಮಾರ್ಟ್ಫೋನ್, ಟಿವಿ, ಲ್ಯಾಪ್ಟಾಪ್ ಅಥವಾ ಗೃಹೋಪಯೋಗಿ ಉಪಕರಣಗಳನ್ನು ಅಪ್ಗ್ರೇಡ್ ಮಾಡಲು ಯೋಜಿಸುತ್ತಿದ್ದರೂ, ಅದನ್ನು ಮಾಡಲು ಇದಕ್ಕಿಂತ ಉತ್ತಮ ಸಮಯ ಎಂದಿಗೂ ಸಿಗಲಾರದು. D.I.S.C.O. ಕೊಡುಗೆಗಳ ವಿವರ ಇಲ್ಲಿದೆ: ಸ್ಮಾರ್ಟ್ಫೋನ್ಗಳು ಮತ್ತು ಪರಿಕರಗಳು: ಗ್ರಾಹಕರು ₹10,999 ರಿಂದ ಪ್ರಾರಂಭವಾಗುವ ಕೈಗೆಟುಕುವ 4G ಸ್ಮಾರ್ಟ್ಫೋನ್, ₹13,999 ನಿಂದ 5G ಸ್ಮಾರ್ಟ್ಫೋನ್ ಅಥವಾ ಐಫೋನ್ಗಳು ಮತ್ತು ₹2 ಲಕ್ಷದವರೆಗೆ ಬೆಲೆಯ ಫೋಲ್ಡೆಬಲ್ ಫೋನ್ ಸೇರಿದಂತೆ ಪ್ರೀಮಿಯಂ ಫ್ಲ್ಯಾಗ್ ಶಿಪ್ ಸಾಧನಗಳನ್ನು ಹುಡುಕುತ್ತಿರಲಿ, ರಿಲಯನ್ಸ್ ಡಿಜಿಟಲ್ ಪ್ರತಿ ಬೆಲೆ ವಿಭಾಗದಲ್ಲಿ ಆಯ್ಕೆಗಳನ್ನು ಹೊಂದಿದೆ. ಗ್ರಾಹಕರು 30 ತಿಂಗಳವರೆಗೆ ನೋ ಕಾಸ್ಟ್ ಇಎಂಐ, ಆಯ್ದ ಸ್ಮಾರ್ಟ್ಫೋನ್ಗಳಿಗೆ 10,000 ರೂ.ವರೆಗೆ ವಿನಿಮಯ ಬೋನಸ್, ಇಯರ್ಬಡ್ಗಳು, ಹೆಡ್ಫೋನ್ಗಳು, ಬ್ಲೂಟೂತ್ ಸ್ಪೀಕರ್ಗಳು, ಧರಿಸಬಹುದಾದ ವಸ್ತುಗಳು ಮತ್ತು ಮೊಬೈಲ್ ಬಿಡಿಭಾಗಗಳಿಗೆ ಯುಪಿಐ ಪಾವತಿಗಳ ಮೇಲೆ 10% ವರೆಗೆ ರಿಯಾಯಿತಿ ಮತ್ತು ಆಯ್ದ ಬ್ಲೂಟೂತ್ ಸ್ಪೀಕರ್,, ಇಯರ್ಬಡ್ ಮತ್ತು ಪವರ್ ಬ್ಯಾಂಕ್ ಮೇಲೆ ₹15,000 ಅಥವಾ ಅದಕ್ಕಿಂತ ಹೆಚ್ಚಿನ ಬೆಲೆಯ ಖರೀದಿಗಳೊಂದಿಗೆ ಫ್ಲಾಟ್ 50% ರಿಯಾಯಿತಿ ಪಡೆಯಬಹುದು. ಗೃಹೋಪಯೋಗಿ ಉಪಕರಣಗಳು: ₹50,000 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಗೆ ಶಾಪಿಂಗ್ ಮಾಡಿ ಮತ್ತು 43,900 ರೂ.ಗಳ ಡೈಸನ್ ಬಿಗ್ ಬಾಲ್ ವ್ಯಾಕ್ಯೂಮ್ ಕ್ಲೀನರ್ ಅನ್ನು 13,900 ರೂ.ಗೆ ಪಡೆಯಿರಿ. ₹39,990 ನಿಂದ ಪ್ರಾರಂಭವಾಗುವ 65-ಇಂಚಿನ 4K UHD ಗೂಗಲ್ ಟಿವಿ ಮೂಲಕ ನಿಮ್ಮ ಮನೆಯ ಮನರಂಜನೆಯನ್ನು ನವೀಕರಿಸಿ, ಮತ್ತು ₹39,990 ನಿಂದ ಪ್ರಾರಂಭವಾಗುವ ಸೈಡ್ ಬೈ ಸೈಡ್ ರೆಫ್ರಿಜರೇಟರ್ ಆಯ್ಕೆ ಮಾಡಿ ಮತ್ತು 12000/- ವರೆಗಿನ ಮೌಲ್ಯದ ಉಚಿತ ಪಡೆಯಿರಿ ಮತ್ತು 15,000/-ವರೆಗೆ ವಿನಿಮಯ ಪ್ರಯೋಜನಗಳನ್ನು ಪಡೆಯಿರಿ. ಗ್ರಾಹಕರು *₹18,000 ಮೌಲ್ಯದ ಉಚಿತಗಳೊಂದಿಗೆ ₹55,990 ರಿಂದ ಪ್ರಾರಂಭವಾಗುವ ವಾಷರ್ ಡ್ರೈಯರ್ ಅನ್ನು ಸಹ ಮನೆಗೆ ತರಬಹುದು. ಲ್ಯಾಪ್ ಟಾಪ್ಗಳು: ಕೇವಲ ₹ 39,999 ರಿಂದ ಪ್ರಾರಂಭವಾಗುವ ಲ್ಯಾಪ್ ಟಾಪ್ಗಳ ಮೇಲೆ ₹ 5,000 ವರೆಗೆ ಉಚಿತ 1+2 ವರ್ಷಗಳ ವಿಸ್ತೃತ ವಾರಂಟಿ ಮತ್ತು ವಿನಿಮಯ ಪ್ರಯೋಜನಗಳನ್ನು ಪಡೆಯಿರಿ.








