ಹೊಸದಿಲ್ಲಿ, ಮೇ 13: ಇಂದು ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಿವೃದ್ಧಿ ಹಾಗೂ ಸ್ವಾವಲಂಬಿ ಭಾರತಕ್ಕಾಗಿ 20 ಲಕ್ಷ ಕೋಟಿ ರೂಪಾಯಿಯ ಪ್ಯಾಕೇಜ್ ಅನ್ನು ಘೋಷಿಸಲಾಗಿದೆ ಎಂದು ಹೇಳಿದರು. ಆತ್ಮ ನಿರ್ಭರ ಭಾರತ ಅಭಿಯಾನ ಅಂದರೆ ಸ್ವಯಂ ಅವಲಂಬಿತ ಭಾರತ ನಿರ್ಮಾಣದ ಪ್ಯಾಕೇಜ್ ಎಂದು ಹೇಳಿದ ಹಣಕಾಸು ಸಚಿವೆ, ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ರೂಪಿಸಲು ಐದು ಸ್ತಂಭಗಳಾದ ಆರ್ಥಿಕತೆ, ಮೂಲ ಸೌಕರ್ಯಗಳು, ತಂತ್ರಜ್ಞಾನ, ಪ್ರಜಾಪ್ರಭುತ್ವ ಮತ್ತು ಬೇಡಿಕೆಗಳ ಮೇಲೆ ಈ ಪ್ಯಾಕೇಜ್ ಘೋಷಿಸಲಾಗಿದೆ ಎಂದು ಹೇಳಿದರು.
ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗಾಗಿ
3 ಲಕ್ಷ ಕೋಟಿ ಸಾಲವನ್ನು ನೀಡಲಾಗುತ್ತಿದೆಯೆಂದು ತಿಳಿಸಿದ ನಿರ್ಮಲಾ ಸೀತಾರಾಮನ್ ಈ ಸಾಲ ಜಾಮೀನು ರಹಿತವಾದುದು ಎಂದು ತಿಳಿಸಿದರು. ಎಂಎಸ್ಎಂಇ ಅಂದರೆ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್ ಅಂದರೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿಗೆ ಮಹತ್ವ ನೀಡಲಾಗುತ್ತಿದೆ. ಇದರಿಂದ 45 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಕಂಪನಿಗಳಿಗೆ ಲಾಭವಾಗಲಿದೆ ಎನ್ನಲಾಗಿದೆ ಎಂದು ಹೇಳಿದರು.
15 ಸಾವಿರಕ್ಕಿಂತ ಕಡಿಮೆ ಮಾಸಿಕ ಸಂಬಳ ಇರುವ ಉದ್ಯೋಗಿಗಳ, 100ಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಕಂಪೆನಿಗಳ ಹಾಗೂ ಅಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಇಪಿಎಫ್ ಕಂತನ್ನು ಮುಂದಿನ ಮೂರು ತಿಂಗಳು ಕೇಂದ್ರ ಸರ್ಕಾರವೇ ಭರಿಸಲಿದೆ. ಇಪಿಎಫ್ ಪೇಮೆಂಟ್ ಗಾಗಿ 2,500 ಕೋಟಿ ನೆರವನ್ನು ನೀಡಲಾಗಿದ್ದು, ಇದರಿಂದ 72 ಲಕ್ಷ ಉದ್ಯೋಗಿಗಳಿಗೆ ನೆರವಾಗಲಿದೆ ಎಂದು ಸಚಿವೆ ತಿಳಿಸಿದರು.
ಪ್ರಫೋಷನಲ್ ಫೀ, ಕ್ಯಾಂಟ್ರಾಕ್ಟ್ ಪೇಮೆಂಟ್, ಬಡ್ಡಿ, ಬಾಡಿಗೆ, ಡಿವಿಡೆಂಡ್, ಕಮಿಷನ್, ಬ್ರೋಕರೇಜ್ ಸೇರಿದಂತೆ ಎಲ್ಲವೂ ಟಿಡಿಎಸ್ ಕಡಿತಕ್ಕೆ ಅನ್ವಯವಾಗಲಿದ್ದು, ಇದು ನಾಳೆಯಿಂದ ಮಾರ್ಚ್ 31, 2021ರವರೆಗೆ ಇರಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 50 ಸಾವಿರ ಕೋಟಿ ಹೊರೆ ಬೀಳಲಿದೆ. ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಗೆ ಈ ಮೊದಲು ನಿಗದಿಯಾಗಿದ್ದ ಜುಲೈ 31 ರಿಂದ ಅಕ್ಟೋಬರ್ 31ರವರೆಗಿನ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಮತ್ತು ಟ್ಯಾಕ್ಸ್ ಆಡಿಟ್ ಅವಧಿಯನ್ನು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ ಹೆಚ್ಚುವರಿ ಮೊತ್ತವಿಲ್ಲದೇ ಪಾವತಿಸಲು ವಿವಾದ್ ಸೇ ವಿಶ್ವಾಸ್ ಯೋಜನೆಯಡಿಯಲ್ಲಿ ಅವಕಾಶ ನೀಡಿದ್ದು, 31ನೇ ಡಿಸೆಂಬರ್ 2020ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಹಣಕಾಸು ಸಚಿವೆ ಹೇಳಿದರು.
ಟೆಂಡರ್ ನೀತಿಯಲ್ಲಿ ಮಾರ್ಪಾಡು ಮಾಡಲಾಗಿದ್ದು, ಸುಮಾರು 200 ಕೋಟಿಗಳವರೆಗಿನ ವಿದೇಶಿ ಕಂಪನಿಗಳ ಟೆಂಡರ್ ಗೆ ಅವಕಾಶವಿಲ್ಲ ಎಂದರು. ಇದರಿಂದ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ನೆರವಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಲಿಟಲ್ ರಾಹುಲ್ ಗಾಂಧಿ” ಅವರ ಪ್ರೀತಿಯ ಅಜ್ಜಿ, ಪ್ರಸಿದ್ಧ ಇಂದಿರಾ ಗಾಂಧಿಯವರೊಂದಿಗಿನ ಸಂಭಾಷಣೆಯ ತುಣುಕು.
56 ವರ್ಷದ ರಾಹುಲ್ ಗಾಂಧಿ ಅವರು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ತಮ್ಮ ಪ್ರೀತಿಯ ಅಜ್ಜಿ ನೀಡಿದ ಸ್ಫೂರ್ತಿದಾಯಕ ಕೊಡುಗೆಯನ್ನು ಗೌರವಿಸಬೇಕೆಂದು ಹಾರೈಸುತ್ತೇನೆ. ನಮ್ಮ ದಿವಂಗತ ಪ್ರಧಾನಿಯವರು...








