ಭುವನೇಶ್ವರ: ವ್ಯಕ್ತಿಯೊಬ್ಬ ಸಗಣಿಯಲ್ಲಿ ಬರೋಬ್ಬರಿ 20 ಲಕ್ಷ ರೂ. ಮುಚ್ಚಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಒಡಿಶಾದ (Odisha) ಬಾಲಾಸೋರ್ (Balasore) ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮತ್ತು ಒಡಿಶಾ ಪೊಲೀಸ್ ತಂಡ ದಾಳಿ ನಡೆಸಿ ಕಮರ್ದಾ ಪೊಲೀಸ್ ಠಾಣಾ ವ್ಯಾಪ್ತಿಯ ಬಡಮಂಡರುಣಿ ಗ್ರಾಮದಲ್ಲಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಗೋಪಾಲ್ ಎಂಬಾತ ಹೈದರಾಬಾದ್ನ ಕೃಷಿ ಆಧಾರಿತ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಆತ ತಾನು ಕೆಲಸ ಮಾಡುತ್ತಿದ್ದ ಕಂಪನಿಯ ಲಾಕರ್ ನಿಂದ 20 ಲಕ್ಷ ರೂ.ಗೂ ಅಧಿಕ ಹಣವನ್ನು ಕಳ್ಳತನ ಮಾಡಿದ್ದ. ನಂತರ ಸೋದರ ಮಾವ ರವೀಂದ್ರ ಬೆಹೆರಾ ಮೂಲಕ ಹಣವನ್ನು ಗ್ರಾಮಕ್ಕೆ ಕಳುಹಿಸಿದ್ದಾನೆ ಎನ್ನಲಾಗಿದೆ.
ದೂರಿನ ಆಧಾರದ ಮೇರೆಗೆ ಹೈದರಾಬಾದ್ ಪೊಲೀಸರ ತಂಡ ಕಮರ್ದಾ ಪೊಲೀಸರೊಂದಿಗೆ ರವೀಂದ್ರ ಮನೆಯ ಮೇಲೆ ದಾಳಿ ನಡೆಸಿ ಸಗಣಿ ರಾಶಿಯಲ್ಲಿ ಬಚ್ಚಿಟ್ಟಿದ್ದ ಹಣ ವಶಕ್ಕೆ ಪಡೆದಿದ್ದಾರೆ. ಘಟನೆಯ ನಂತರ ಆರೋಪಿಗಲು ಪರಾರಿಯಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.








