ADVERTISEMENT
Monday, June 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Saaksha Special

ಲೋಕಸಭೆ ಕರ್ನಾಟಕದಲ್ಲಿ ಬಿಜೆಪಿಗೆ 20 ಸೀಟು ಪಕ್ಕಾ! ಸಮೀಕ್ಷೆ

admin by admin
August 22, 2023
in Saaksha Special, Newsbeat, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಲೋಕಸಭೆ ಕರ್ನಾಟಕದಲ್ಲಿ ಬಿಜೆಪಿಗೆ 20 ಸೀಟು ಪಕ್ಕಾ! ಸಮೀಕ್ಷೆ

20 seats for BJP in Lok Sabha Karnataka! Survey

Related posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

June 29, 2026
ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

June 29, 2026

ಲೋಕಸಭೆ ಚುನಾವಣೆಗೆ ಇನ್ನೂ ಏಳೆಂಟು ತಿಂಗಳುಗಳು ಬಾಕಿ ಇದ್ದು ಎಲ್ಲ ಪಕ್ಷಗಳು ಚುನಾವಣೆಗೆ ಸಿದ್ದವಾಗುತ್ತಿವೆ. ಪಕ್ಷಗಳು ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಆಡಳಿತಾರೂಢ ಎನ್ ಡಿಎ ಸರ್ಕಾರವನ್ನು ಸೋಲಿಸಲು ವಿರೋಧ ಪಕ್ಷಗಳು ಒಂದಾಗಿ INDIA ಮೈತ್ರಿ ಕೂಟವನ್ನು ರಚಿಸಿಕೊಂಡಿವೆ. ಇನ್ನು ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ತನ್ನ ಅಭಿವೃದ್ಧಿಯ ಟ್ರ್ಯಾಕ್ ರೆಕಾರ್ಡ್ ಮತ್ತು ಹಿಂದುತ್ವ ಸಿದ್ಧಾಂತವನ್ನು ಮುಂದಿಟ್ಟುಕೊಂಡು ಮಗದೊಮ್ಮೆ ಜನರ ಮುಂದೆ ಹೋಗಲು ನಿರ್ಧರಿಸಿದೆ.

ಕರ್ನಾಟಕದಲ್ಲಿ ಬಿಜೆಪಿ 66 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಹೀನಾಯ ಸೋಲು ಕಂಡಿದೆ. ಇನ್ನೂ ಕಾಂಗ್ರೆಸ್ 135 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅಭೂತಪೂರ್ವ ಜಯ ಸಾಧಿಸಿದೆ. ಇದು ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಅನ್ನು ಉಸಿರಾಡುವಂತೆ ಮಾಡಿದೆ. ಇದೇ ಉತ್ಸಾಹದಲ್ಲಿ ಕಾಂಗ್ರೆಸ್ ಲೋಕಸಭೆ ಚುನಾವಣೆಯನ್ನು ಎದುರಿಸಲು ದಾಪುಗಾಲು ಇಡುತ್ತಿದೆ.

ರಾಜ್ಯದ ಈ ಫಲಿತಾಂಶ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಕಳೆದ ಬಾರಿಗಿಂತ ಅತಿಹೆಚ್ಚು ಸ್ಥಾನ ಗೆಲ್ಲುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಒಂದು ಸಮೀಕ್ಷೆ ಬೇರೆಯದ್ದೇ ಹೇಳುತ್ತಿದೆ. ಒಂದು ವೇಳೆ ಈಗಲೇ ಲೋಕಸಭಾ ಸಾರ್ವತ್ರಿಕ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುತ್ತದೆ ಎಂದು ಖಾಸಗಿ ಸುದ್ದಿ ಸಂಸ್ಥೆ ಟೈಮ್ಸ್ ನೌ – ಇಟಿಜಿ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

ಹೌದು ಈಗಲೇ ಲೋಕಸಭೆ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿಗೆ 18ರಿಂದ 20 ಸ್ಥಾನ ಬರಲಿವೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಕೂಟ 8ರಿಂದ 10 ಸ್ಥಾನ ಗಳಿಸಬಹುದು. ಬಿಜೆಪಿಗೆ ಶೇ.44.6 ಹಾಗೂ ಇಂಡಿಯಾ ಕೂಟಕ್ಕೆ ಶೇ.43.3 ಮತಗಳು ಬರಬಹುದು ಎಂದು ಭವಿಷ್ಯ ನುಡಿಯಲಾಗಿದೆ. ಕಳೆದ ಸಲ ಬಿಜೆಪಿ 25, ಕಾಂಗ್ರೆಸ್ 1, ಜೆಡಿಎಸ್ 1 ಹಾಗೂ ಪಕ್ಷೇತರರು 1 ಸ್ಥಾನದಲ್ಲಿ ಗೆದ್ದಿದ್ದರು.

ಇನ್ನೂ ದೇಶದ ವಿಚಾರವಾಗಿ ನೋಡುವುದಾರೆ ಬಿಜೆಪಿ ನೇತೃತ್ವದ ಎನ್‌ಡಿಎಗೆ 296 ರಿಂದ 326 ಸ್ಥಾನ. ಈಗಷ್ಟೇ ರಚನೆಯಾಗಿರುವ ‘ಇಂಡಿಯಾ’ ಮೈತ್ರಿಕೂಟ 160 ರಿಂದ 190 ಹಾಗೂ ಇತರರು 70ರಿಂದ 80 ಸ್ಥಾನ ಗೆಲ್ಲಲಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎಗೆ 353 ಸ್ಥಾನ ಬಂದಿದ್ದವು. ಈಗಿನ ಸಮೀಕ್ಷೆ ಅದಕ್ಕಿಂತ ಕಡಿಮೆ ಸೀಟು ನೀಡಿದ್ದರೂ, ನರೇಂದ್ರ ಮೋದಿ ಅವರಿಗೆ ಹ್ಯಾಟ್ರಿಕ್ ಬಾರಿಸುವುದು ಖಚಿತವಾಗಿದೆ. ಇನ್ನು ಎನ್‌ಡಿಎ ಶೇ.55, ಇಂಡಿಯಾ ಶೇ.36 ಹಾಗೂ ಇತರರು ಶೇ.9ರಷ್ಟು ಮತ ಗಳಿಸಲಿದ್ದಾರೆ.

ಈ ನಡುವೆ, ಎನ್‌ಡಿಎ ಅಂಗಪಕ್ಷಗಳನ್ನು ಬದಿಗೆ ಸರಿಸಿದರೆ ಬಿಜೆಪಿಯೊಂದೇ 288ರಿಂದ 314 ಸ್ಥಾನ ಗಳಿಸಲಿದೆ. ಕಾಂಗ್ರೆಸ್ 62ರಿಂದ 80 ಸ್ಥಾನ ಗಳಿಸಲಿದೆ ಎಂದು ಸಮೀಕ್ಷೆ ವಿವರಿಸಿದೆ.

Tags: Election 2024indiaLok Sabha 2024NDA
ShareTweetSendShare
Join us on:

Related Posts

ಬಸ್ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸಾರಿಗೆ ಸಂಸ್ಥೆಗಳ ಉಳಿವಿಗೆ ದರ ಏರಿಕೆ ಅನಿವಾರ್ಯ – ಡಿಕೆ ಶಿವಕುಮಾರ್

ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ

by Shwetha
June 29, 2026
0

ಬೆಂಗಳೂರು: ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಪಾನ್ ಮಸಾಲ ಹಾಗೂ ಗುಟ್ಕಾವನ್ನು ಸಂಪೂರ್ಣವಾಗಿ ನಿಷೇಧಿಸಲು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ರಾಜ್ಯದ ಬೊಕ್ಕಸಕ್ಕೆ ನೂರು ಕೋಟಿ...

ಮೋದಿ ಸರ್ಕಾರದ ವಿದೇಶಾಂಗ ನೀತಿಗೆ ಸಕ್ಸಸ್ : ಶತ್ರುಗಳಿಗೆ ಹಾರ್ಮುಜ್ ಬಂದ್ ಮಿತ್ರ ಭಾರತಕ್ಕೆ ಮುಕ್ತ ಅವಕಾಶ ಟ್ರಂಪ್ ಬೆದರಿಕೆಗಳಿಗೆ ಕವಡೆ ಕಾಸಿನ ಬೆಲೆ ನೀಡದ ಇರಾನ್

ಸಿಎಂ ಸಿಂಹಾಸನ ನಶ್ವರ ಜನರ ಹೃದಯ ಸಿಂಹಾಸನ ಶಾಶ್ವತ: ಅಧಿಕಾರ ಹೋದರೂ ಕುಗ್ಗದ ವರ್ಚಸ್ಸು ಮಾಜಿ CM ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

by Shwetha
June 29, 2026
0

ಮೈಸೂರು: ಮುಖ್ಯಮಂತ್ರಿ ಸ್ಥಾನ ಎಂಬುದು ಶಾಶ್ವತವಲ್ಲ, ಅದು ಬಂದು ಹೋಗುವಂತದ್ದು. ಆದರೆ ಜನರ ಹೃದಯದಲ್ಲಿ ಪಡೆಯುವ ಸ್ಥಾನ ಎಂದಿಗೂ ಅಳಿಯದ ಶಾಶ್ವತ ಆಸ್ತಿ ಎಂದು ಮಾಜಿ ಮುಖ್ಯಮಂತ್ರಿ...

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ನಾವು ಕೇಂದ್ರದ ಪರ: ಕರ್ನಾಟಕವನ್ನು ಸ್ಲೀಪರ್ ಸೆಲ್ ಆಗಲು ಬಿಡುವುದಿಲ್ಲ ಎಂದ ಸಚಿವ ಪ್ರಿಯಾಂಕ್ ಖರ್ಗೆ

by Shwetha
June 29, 2026
0

ಬೆಂಗಳೂರು: ರಾಷ್ಟ್ರೀಯ ಭದ್ರತೆ ಮತ್ತು ದೇಶದ ಹಿತಾಸಕ್ತಿಯ ವಿಷಯ ಬಂದಾಗ ರಾಜ್ಯ ಸರ್ಕಾರವು ಯಾವಾಗಲೂ ಕೇಂದ್ರದ ಒಕ್ಕೂಟ ಸರ್ಕಾರದ ಪರವಾಗಿ ಇರುತ್ತದೆ. ಯಾವುದೇ ಕಾರಣಕ್ಕೂ ಕರ್ನಾಟಕವನ್ನು ದೇಶದ್ರೋಹಿಗಳ...

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

ಚಪ್ಪಲಿ ಎಸೆದವರೇ ಒಂದು ದಿನ ಪ್ರದೀಪ್ ಈಶ್ವರ್ ಗೆ ಹಾರ ಹಾಕ್ತಾರೆ: ಯುಟಿ ಖಾದರ್ ಭವಿಷ್ಯ

by Shwetha
June 29, 2026
0

ಮಂಗಳೂರು: ಕೆಂಪೇಗೌಡ ದಿನಾಚರಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ....

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು ನನ್ನ ಬೆಂಬಲದಿಂದಲೇ: ಎಚ್ಡಿಕೆ ಕಾಲೆಳೆದ ಶಾಸಕ ಜಿಟಿ ದೇವೇಗೌಡ

by Shwetha
June 29, 2026
0

ಮೈಸೂರು: ಜೆಡಿಎಸ್ ಹಿರಿಯ ನಾಯಕ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ನೇರ ವಾಗ್ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram