ಬೆಂಗಳೂರು: ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರಾದ ಎನ್ ನರಸಮ್ಮ ಆದೇಶಿಸಿದ್ದಾರೆ.
ಅತ್ಯಾಚಾರದಿಂದಾಗಿ ಗರ್ಭವತಿಯನ್ನಾಗಿ ಮಾಡಿದ್ದ. ಹೀಗಾಗಿ ಆತನ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸರು ಪೋಕ್ಸೋ ಕಾಯ್ದೆ(Pocso Act)ಯಡಿ ಪ್ರಕರಣ ದಾಖಲಿಸಿದ್ದರು. ಸದ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಲಾಗಿದೆ. ನೊಂದ ಬಾಲಕಿಗೆ ಜಿಲ್ಲಾ ಹಾಗೂ ಕಾನೂನು ಪ್ರಾಧಿಕಾರದಿಂದ ಏಳು ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಲಾಗದೆ.