ಕೊರೊನಾ ಭೀತಿಯಿಂದ ದೇಶವೇ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ರಾಜಧಾನಿಯಲ್ಲಿ ಕೆಲ ಕಡೆ ಕ್ಲಿನಿಕ್ ಗಳು ಬಂದ್ ಆಗಿವೆ. ಹಾಗಾಗಿ ರಾಜ್ಯ ಸರ್ಕಾರ ಕ್ಲಿನಿಕ್ ಓಪನ್ ಮಾಡುವಂತೆ ಸೂಚನೆ ನೀಡಿದೆ. ಇದರ ಜೊತೆಗೆ ಬಿಎಂಟಿಸಿ ಆಸ್ಪತ್ರೆಗಳ ಸಿಬ್ಬಂದಿಗಳಿಗಾಗಿ 200 ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಆಸ್ಪತ್ರೆ ಸಿಬ್ಬಂದಿಗಳ ಪ್ರಯಾಣಕ್ಕೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಈ ವ್ಯವಸ್ಥೆ ಮಾಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುವವರಿಗಾಗಿ 200 ಬಸ್ ರೂಟ್ ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆ ಸಿಬ್ಬಂದಿಗಳು ತಾವು ಕಾರ್ಯನಿರ್ವಹಿಸುವ ಸಂಸ್ಥೆಗಳ ಗುರುತಿನ ಚೀಟಿ ತೋರಿಸಿ ಈ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಈ ವಿಶೇಷ ಸೇವೆ ನೀಡಲ್ಲ ಎಂದು ಸಚಿವರು ಹೇಳಿದ್ದಾರೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








