ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಲಕ್ಷ್ಮೀ ಯೋಜನೆಗೆ ನಾಳೆ ಚಾಲನೆ ಸಿಗುತ್ತಿದೆ. 1.10 ಕೋಟಿ ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮಾ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಲಕ್ಷ್ಮೀ ಯೋಜನೆಗೆ ನಾಳೆ ಅಧಿಕೃತವಾಗಿ ಚಾಲನೆ ಸಿಗಲಿದೆ. ನಾಳೆಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ಭಾಗಿಯಾಗಲಿದ್ದಾರೆ. 1.10 ಕೋಟಿ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡುತ್ತೇವೆ. ಮಹಿಳೆಯರ ಖಾತೆಗೆ ನಾಳೆಯೇ ಹಣ ಜಮಾ ಆಗಲಿದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಹರಕೆ ಸಲ್ಲಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯಶಸ್ವಿಯಾಗಲು ಹರಕೆ ಕಟ್ಟಿಕೊಂಡಿದ್ದರು. ಹೀಗಾಗಿ ಇಂದು ಹರಕೆ ಒಪ್ಪಿಸಿದರು. ನಾಳೆ ಮೈಸೂರಿನಲ್ಲಿ ಗೃಹ ಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ಕಾರ್ಯಕ್ರಮದ ಸಿದ್ಧತೆ ನಡೆದಿದೆ.